Advertisement

Nagamangala Case; ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ: ಸಚಿವ ಚಲುವರಾಯಸ್ವಾಮಿ

12:03 AM Sep 13, 2024 | Team Udayavani |

ನಾಗಮಂಗಲ (ಮಂಡ್ಯ): ಪಟ್ಟಣದಲ್ಲಿ ಬುಧವಾರ ರಾತ್ರಿ ನಡೆದ ಕಲ್ಲು ತೂರಾಟ, ಗಲಭೆ ಸ್ಥಳಕ್ಕೆ ಗುರುವಾರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ ಪರಿಶೀಲಿಸಿ ಘಟನೆ ಬಗ್ಗೆ ಪೊಲೀಸ್‌ ಅಧಿಕಾರಿಗಳಿಂದ ಮಾಹಿತಿ ಪಡೆದರು.

Advertisement

ಬಳಿಕ ನಗರದ ತಾಲೂಕು ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತ್ಯಕ್ಷದರ್ಶಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಗ್ಯಾರೇಜ್‌ಗಳ ಮಾಲಕರು ಮತ್ತು ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿ, ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಆಕಸ್ಮಿಕವಾಗಿ ನಡೆದ ಘಟನೆ, ಅನಂತರ ದೊಡ್ಡಮಟ್ಟದ ಗಲಭೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 54ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದ್ದು, ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ. ಕೋಮು ಸೌಹಾರ್ದತೆ ಕದಡುವುದನ್ನು ಸರಕಾರ ಸಹಿಸಲ್ಲ ಎಂದರು.

ಗಲಭೆಯಲ್ಲಿ ಹಾನಿಗೊಳಗಾದ ಅಂಗಡಿಗಳು ಹಾಗೂ ಮನೆಗಳ ನಷ್ಟವನ್ನು ಅಂದಾಜಿಸಲಾಗುತ್ತಿದೆ. ಮಾಲಕರಿಗೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು. ಇದು ನನ್ನ ಸ್ವಕ್ಷೇತ್ರವಾಗಿದ್ದು, ನಷ್ಟ ಅನುಭವಿಸಿದವರಿಗೆ ವೈಯಕ್ತಿಕವಾಗಿಯೂ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಈ ಘಟನೆಯನ್ನು ವಿಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next