Advertisement

ಹುಲಿಕೆರೆಯಲ್ಲಿ ನಡೆಯದ ರಾಜ್ಯೋತ್ಸವ

02:32 PM Nov 02, 2019 | Suhan S |

ಶ್ರೀರಂಗಪಟ್ಟಣ: ತಾಲೂಕಿನ ಹುಲಿಕೆರೆ ಗ್ರಾಪಂನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸದ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರು ಅಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹುಲಿಕೆರೆ ಪಂಚಾಯಿತಿ ಮುಂಭಾಗದಲ್ಲಿ ಜಮಾಯಿಸಿ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

Advertisement

ಕರ್ನಾಟಕ ರಾಜ್ಯೋತ್ಸವ ಸರ್ಕಾರಿ ಕಾರ್ಯಕ್ರಮವಾಗಿದ್ದು, ಪಂಚಾಯಿತಿಗೆ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ಇಂತಹ ನಿರ್ಲಕ್ಷ್ಯ ಧೋರಣೆ ಹೊಂದಿ ರುವ ಅಧಿಕಾರಿಗಳು, ಕರ್ನಾಟಕ ಹಾಗೂ ಕನ್ನಡಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಪಿಡಿಒ ಹಾಗೂ ಕಾರ್ಯ ದರ್ಶಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂಬಂಧ ಪಂಚಾಯಿತಿ ಅಧ್ಯಕ್ಷರು ಸಹ ಅಧಿಕಾರಿಗಳೊಂದಿಗೆ ಶಾಮೀಲಾಗಿರು ವಂತೆ ಮೇಲ್ನೋಟಕ್ಕೆ ಗೋಚರಿಸುತ್ತಿದೆ. ಈ ಕೂಡಲೇ ತಾಪಂ ಇಒ ಸ್ಥಳ ಧಾವಿಸಿ, ರಾಜ್ಯೋತ್ಸವ ಆಚರಿಸದೇ ಬೇಜವಾಬ್ದಾರಿ ವರ್ತನೆ ತೋರಿರುವ ಅಧಿಕಾರಿಗಳನ್ನು ಅಮಾನತುಗೊಳಿಸ ಬೇಕು ಎಂದು ಆಗ್ರಹಿಸಿದರು.

ನಂತರ ದೂರವಾಣಿ ಮೂಲಕ ಪ್ರತಿಭಟನಾಕಾರರರನ್ನು ಸಂಪರ್ಕಿಸಿದ ತಾಪಂ ಇಒ ನಾಗವೇಣಿ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಗಿದೆ ಎಂದು ಕನ್ನಡ ಪರ ಸಂಘಟಕರು ತಿಳಿಸಿದ್ದಾರೆ. ಕನ್ನಡ ಪರ ಮುಖಂಡರಾದ ಧುೃವ ಕುಮಾರ್‌, ಕರೀಗೌಡ, ಮೋಹನ್‌, ಕುಮಾರ್‌ ಸೇರಿ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next