Advertisement

ನೈಟ್ ಕರ್ಪ್ಯೂ ಆದೇಶ ಪುನರ್ ಪರಿಶೀಲನೆ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

03:14 PM Dec 26, 2021 | Team Udayavani |

ಮೈಸೂರು: ರಾಜ್ಯದಾದ್ಯಂತ ಡಿ.28ರಿಂದ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಆದೇಶವನ್ನು ಪುನರ್ ಪರಿಶೀಲನೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಕ್ಕಪಕ್ಕದ ರಾಜ್ಯಗಳ ಕೋವಿಡ್ ಪರಿಸ್ಥಿತಿ ನೋಡಿ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ.ಇದರ ಜೊತೆಗೆ ಹಲವು ಕಠಿಣ ನಿಯಮ ಜಾರಿ ಮಾಡಲಾಗಿದೆ. ಇದರಿಂದ ಉದ್ಯಮಿಗಳಿಗೆ ನಷ್ಟವಾಗುತ್ತದೆ ಎನ್ನುವುದು ಗಮನಕ್ಕೆ ಬಂದಿದೆ. ಆದರೆ ಆರೋಗ್ಯದ ಹಿತದೃಷ್ಟಿಯಿಂದ ಬದಲಾವಣೆ ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ಎರಡನೇ ಡೋಸ್ ಮತ್ತು ಬೂಸ್ಟರ್ ಡೋಸ್ ನಡುವೆ 9 ರಿಂದ 12 ತಿಂಗಳ ಅಂತರವಿರಬೇಕು: ವರದಿ

ಫೆಬ್ರವರಿಯಲ್ಲಿ ಒಮಿಕ್ರಾನ್ ಪ್ರಕರಣಗಳು ಜಾಸ್ತಿಯಾಗುತ್ತದೆ ಎಂಬ ವರದಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, “ಇದು ಕೇವಲ ಅಂದಾಜು ಮಾತ್ರ. ಇದಕ್ಕೆ ಯಾವುದೇ ಪುರಾವೆ ಇಲ್ಲ. ದೇಶಾದ್ಯಂತ ಒಮಿಕ್ರಾನ್ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಯೂರೋಪ್ ದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡ ನಂತರ ನಮ್ಮಲ್ಲಿ ಕಾಣಿಸಿಕೊಂಡಿತ್ತು. ಅದೇ ಆಧಾರದಲ್ಲಿ ತಜ್ಞರು ಹೇಳಿದ್ದಾರೆ. ಅದಾಗ್ಯೂ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದೇವೆ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next