Advertisement

ಕ್ವಾರಂಟೈನ್‌ ವಿಧಿಸುವಲ್ಲಿ ಅನುಕಂಪ ಬೇಡ

05:06 AM May 17, 2020 | Suhan S |

ಗೋಕಾಕ: ಬೇರೆ-ಬೇರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳಿಂದ ಬಂದಿರುವ ಜನರ ಆರೋಗ್ಯ ಪರಿಶೀಲಿಸಬೇಕು. ಇದರಲ್ಲಿ ಯಾವುದೇ ಅನುಕಂಪ ತೋರದೆ ಅವರನ್ನು ಕ್ವಾರಂಟೈನ್‌ ಗೆ ಒಳಪಡಿಸಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿ ಕಾರಿಗಳಿಗೆ ಸೂಚನೆ ನೀಡಿದರು.

Advertisement

ಶನಿವಾರ ನಗರ ಹೊರವಲಯದ ಬಸವೇಶ್ವರ ಸಭಾ ಭವನದಲ್ಲಿ ಕೋವಿಡ್‌-19 ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿ ಕಾರಿಗಳ ಸಭೆಯಲ್ಲಿ ದೂರವಾಣಿ ಮೂಲಕ ಅವರು ಮಾತನಾಡಿದರು. ಅಗತ್ಯಬಿದ್ದಲ್ಲಿ ಪೊಲೀಸ್‌ ಸಹಕಾರ ಪಡೆಯುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಯಾವುದೇ ವ್ಯಕ್ತಿಗಳು ತಮ್ಮೂರಿಗೆ ಬಂದಲ್ಲಿ ಜನ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು. ಇಂತಹ ವಿಷಯಗಳನ್ನು ಮುಚ್ಚಿಡುವ ಪ್ರಯತ್ನ ನಡೆಸಿದವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಿದರು.

ತಾಲೂಕು ಮಟ್ಟದ ಅಧಿಕಾರಿಗಳು, ಗೋಕಾಕ, ಮೂಡಲಗಿ ತಾಲೂಕುಗಳ ಪಿಎಚ್‌ಸಿ ವೈದ್ಯಾಧಿಕಾರಿಗಳು, ಪಿಡಿಒಗಳು, ಆಶಾ ಹಾಗೂ ಅಂಗನವಾಡಿ ಮೇಲ್ವಿಚಾರಕಿಯರು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next