Advertisement

ಕೃಷಿ ಉತ್ಪನ್ನ ಮಾರಾಟಕ್ಕೆ ನಿರ್ಬಂಧವಿಲ್ಲ

03:28 PM Apr 09, 2020 | Suhan S |

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಆದೇಶದಂತೆ ಕೋವಿಡ್‌-19  ವೈರಸ್‌ ಹರಡುವಿಕೆಯಿಂದ ಭಾರತದೆಲ್ಲೆಡೆ ಲಾಕ್‌ಡೌನ್‌ ಜಾರಿ ಯಲ್ಲಿದ್ದು, ಅದರಂತೆ ಜಿಲ್ಲೆಯಾದ್ಯಂತ ಲಾಕ್‌ಡೌನ್‌ ಆಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ವತಿಯಿಂದ ವಿವಿಧ ಕೃಷಿ ಚಟುವಟಿಕೆ ಕೈಗೊಳ್ಳಲು ಯಾವುದೇ ಅಡಚಣೆಯಾಗದಂತೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಅಧಿಕೃತ ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟಗಾರರಿಗೆ ಈಗಾಗಲೇ ಗ್ರೀನ್‌ಪಾಸ್‌ ವಿತರಣೆ ಮಾಡಿದ್ದು, ಅಗತ್ಯ ವಸ್ತುಗಳ ಸೇವೆಯಡಿ ಕೃಷಿ ಪರಿಕರ ಹಾಗೂ ಅಧಿಕೃತ ಖಾಸಗಿ ಮಾರಾಟಗಾರರಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ದಾಸ್ತಾನು ಲಭ್ಯವಿದ್ದು, ಅಗತ್ಯತೆಗೆ ಅನುಗುಣವಾಗಿ ರೈತರು ಖರೀದಿಸಬಹುದು ಎಂದರು.

Advertisement

ಹೋಬಳಿ ಮಟ್ಟದಲ್ಲಿ ಸ್ಥಾಪಿಸಿರುವ ಕೃಷಿ ಯಂತ್ರಧಾರೆ ಕೇಂದ್ರ ಗಳು ಸಹ ಕಾರ್ಯನಿರ್ವಹಿಸುತ್ತಿದ್ದು, ರೈತರು ವಿವಿಧ ಕೃಷಿ ಯಂತ್ರೋ ಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯ ಬಹುದಾಗಿದೆ. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಉಳುಮೆ, ಬಿತ್ತನೆ, ಕಟಾವು ಹಾಗೂ ಸಂಸ್ಕರಣೆ ಯಂತ್ರಗಳನ್ನು ಜಿಲ್ಲೆಯ ಒಳಗೆ ಮತ್ತು ಹೊರಗೂ ಸಂಚಾರಕ್ಕೆ ನಿರ್ಬಂಧವಿರುವುದಿಲ್ಲ ಹಾಗೂ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಸಾಗಾಣಿಕೆಗೆ ಸಹ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕಿ ರೂಪಾ ತಿಳಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next