Advertisement

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

09:00 PM Dec 23, 2024 | Team Udayavani |

ಚಿಕ್ಕಮಗಳೂರು: ವಿಧಾನ ಪರಿಷತ್​ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನನಗೆ ಧಮ್ಕಿ ಹಾಕಿದ್ದಾರೆ. ಸುವರ್ಣಸೌಧದಲ್ಲೇ ನನ್ನ ಮೇಲೆ ದಾಳಿಗೆ ಪ್ರಯತ್ನ ನಡೆದಿತ್ತು. ಪೊಲೀಸರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದೂರಿನ ಮೇರೆಗೆ ಕ್ರಮ ಕೈಗೊಳ್ಳುತ್ತಾರೆ. ಆದರೆ, ನಾನು ನೀಡಿದ ದೂರಿನ ಮೇಲೆ ಏಕೆ ಪೊಲೀಸರು ಕ್ರಮ ಕೈಗೊಳ್ಳಲಿಲ್ಲ? ಎಂದು ವಿಧಾನ ಪರಿಷತ್​ ಸದಸ್ಯ ಸಿ.ಟಿ. ರವಿ ಪ್ರಶ್ನಿಸಿದ್ದಾರೆ.

Advertisement

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಮೇಲೆ ದೈಹಿಕ ಹಲ್ಲೆ ನಡೆದ ಸಂಬಂಧ ಕಿಶೋರ್ ಅರುಣ್ ದೂರು ನೀಡಿದ್ದಾರೆ. ಸುವರ್ಣ ಸೌಧದ ಪಶ್ಚಿಮ ಬಾಗಿಲಿನಲ್ಲಿ ಹಲ್ಲೆ ಮುಂದಾದ ವೇಳೆ ಕಿಶೋರ್ ಅರುಣ್ ನನ್ನ ಜತೆ ಇದ್ದರು ಹಾಗಾಗಿ ದೂರು ನೀಡಿದ್ದಾರೆ. ಏನು ಕ್ರಮ ಕೈಗೊಳ್ಳುತ್ತಾರೆ ನೋಡೋಣ ಎಂದರು.

ಖಾನಾಪುರದಲ್ಲಿ ನಾನು ದೂರು ನೀಡಿದ್ದೇನೆ. ಎಫ್‌ಐಆರ್ ಪ್ರತಿ ನೀಡಿಲ್ಲ. ಎಫ್‌ಐಆರ್‌ಗಾಗಿ ನಿನ್ನೆ, ಇಂದು ಹೋಗಿದ್ದಾರೆ. ಕಮಿಷನರ್ 15 ದಿನ  ಸಮಯ ಇದೆ ಎಂದಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ. ನನ್ನ ದೂರಿಗೂ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು. ಕಮಿಷನರ್ ಆ ಜಾಗದಲ್ಲಿರಲು ಸೂಕ್ತರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಲ್ಲೆಗೆ ಮುಂದಾದಾಗ ಇದ್ದುದು ಲಕ್ಷ್ಮೀ ಹೆಬ್ಬಾಳ್ಕರ್  ಕಡೆಯವರು ಯಾರು ಅಪರಿಚಿತರಲ್ಲ. ಇಬ್ಬರು ಲಕ್ಷ್ಮೀ ಹೆಬ್ಬಾಳ್ಕರ್ ಪಿ.ಎ ಹಾಗೂ ಬಹುತೇಕ ಮುಸ್ಲಿಮರಿದ್ದರು. ಮಾಹಿತಿ ಸಂಗ್ರಹಿಸಿದ್ದೇನೆ ಎಲ್ಲವನ್ನೂ ಸಂಬಂಧಪಟ್ಟವರಿಗೆ ನೀಡುತ್ತೇನೆ. ಎಲ್ಲರ ಹೆಸರು ಹಾಕಿ ದೂರು ನೀಡಿದ್ದೇನೆ, ನನ್ನ ಮೇಲೆ ಕ್ರಮ ಮಾಡ್ತಾರೆ. ಅವರ ಮೇಲೆ ಏಕಿಲ್ಲ ಎಂದು ಪ್ರಶ್ನಿಸಿದರು.

ಲಕ್ಷ್ಮೀ ಹೆಬ್ಬಾಳ್ಕರ್ ಏನು ಡಾಕ್ಟರ್ ಅಲ್ಲ: 
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಬೆದರಿಕೆಗೆ ಹೆದರಲ್ಲ. ಬೆಳಗಾಗಿ ರಿಪಬ್ಲಿಕ್ ಆಗಲು ಜನ ಒಪ್ಪಲ್ಲ, ನಾವೂ ಅವಕಾಶ ಕೊಡಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಪ್ರತಿಕ್ರಿಯಿಸಿದರು. ಹೆಬ್ಬಾಳ್ಕರ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್‌ನವರು ತುರ್ತುಪರಿಸ್ಥಿತಿ ಮನೋಸ್ಥಿತಿಯಿಂದ ಹೊರಬರಬೇಕು. ಲಕ್ಷ್ಮೀ ಹೆಬ್ಬಾಳ್ಕರ್  ಏನು ಡಾಕ್ಟರ್ ಅಲ್ಲ. ತಲೆಗೆ ಗಾಯವಾದ ಬಳಿಕವೂ ಮೂರು ನಾಲ್ಕು ಗಂಟೆಗಳ ಕಾಲ ಚಿಕಿತ್ಸೆ ಕೊಡಿಸಿಲ್ಲ. ಖಾನಪುರದಲ್ಲಿ ಗಾಯವಾದರೇ, ರಾಮದುರ್ಗದಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಅವರ ತಪ್ಪು ಮುಚ್ಚಿಕೊಳ್ಳಲು ಆ ತಾಯಿ ಸುಳ್ಳುಗಳ ಸರಮಾಲೆ ಸುರಿಸುತ್ತಿದ್ದಾರೆ. ಸುಳ್ಳನ್ನು ಸೋಲಿಸಬಹುದು ಆದರೆ, ಸತ್ಯವನ್ನು ಸೋಲಿಸಲು ಆಗಲ್ಲ ಎಂದು ಟಾಂಗ್ ನೀಡಿದರು.

Advertisement

ಲಕ್ಷ್ಮೀ ಹೆಬ್ಬಾಳ್ಕರ್ ಪಿ.ಎ.ಗೆ ಅಷ್ಟು ಸೊಕ್ಕು ಹೇಗೆ ಎಲ್ಲಿಂದ ಬಂತು, ಆ ಸೊಕ್ಕಿಗೆ ಕಾರಣ ಯಾರು. ಗೂಂಡಾಗಳಿಗೆ ಸುವರ್ಣ ಸೌಧದೊಳಗೆ ಪಾಸ್ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸಿದ ಅವರು ಓರ್ವ ಶಾಸಕನಿಗೆ ಸುತ್ತಾಡಿಸಿದ್ದು, ಹಿಂಸೆ ಕೊಟ್ಟಿದ್ದು ಆ ಮಹಾ ತಾಯಿ (ಲಕ್ಷ್ಮೀ ಹೆಬ್ಬಾಳ್ಕರ್) ಹೇಗೆ ಒಪ್ಪಿಕೊಳ್ಳುತ್ತಾರೆಂದು ಗೂಂಡಾಗಳು ನನ್ನ ಮೇಲೆ ಹಲ್ಲೆಗೈದ ಆಡಿಯೋ, ವಿಡಿಯೋ ಇದೆ. ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ತನಿಖೆಯೇ ಎಲ್ಲವನ್ನೂ ಹೇಳಬೇಕು:

ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ಪುತ್ರ ಸಮರ್ಥಿಸಿಕೊಂಡಿದ್ದಕ್ಕೆ ಈ ಬಗ್ಗೆ ನಾನೇನು ಹೇಳಲ್ಲ, ತನಿಖೆ ಎಲ್ಲವನ್ನು ಹೇಳಬೇಕು. ಅವರು ಸ್ವತಂತ್ರರು ಏನೇನು ಕೇಳಿಸಿಕೊಂಡರು ಹೇಳಲಿ, ಜಾಣ ಕುರುಡು, ಜಾಣ ಕಿವುಡು ಆಗೋದು ಬೇಡ ಅವರು ಸ್ವತಂತ್ರರಿದ್ದಾರೆ. ಕಾಲ್ ಲೀಸ್ಟ್ ತಗೆದರೇ ಯರ‍್ಯಾರು ಸಂಪರ್ಕದಲ್ಲಿದ್ದರು ಗೊತ್ತಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next