Advertisement

ಕೋವಿಡ್‌ ಲಸಿಕೆ ಕೊರತೆ ಇಲ್ಲ-ಆತಂಕ ಪಡಬೇಕಿಲ್ಲ

07:54 PM Apr 17, 2021 | Girisha |

ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್‌ ಲಸಿಕೆ ಕೊರತೆ ಇಲ್ಲ. ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

Advertisement

ಅವರು ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ವೈದ್ಯಾಧಿ ಕಾರಿಗಳೊಂದಿಗೆ ಕೊರೊನಾ ನಿಯಂತ್ರಣದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ ಜನರ ಬೇಡಿಕೆಗೆ ಪೂರಕವಾಗಿ ಲಸಿಕೆ ದಾಸ್ತಾನಿದ್ದು, ಜನ ಆತಂಕ ಪಡುವ ಅಗತ್ಯವಿಲ್ಲ. ಒಂದೊಮ್ಮೆ ಹೆಸರು ನೋಂದಾಯಿಸಿಕೊಂಡವರು ನಿಗದಿ ಪಡಿಸಿದ ದಿನಾಂಕದಂದು ಲಸಿಕೆ ಪಡೆಯಲು ಸಾಧ್ಯವಾಗದಿದ್ದಲ್ಲಿ ಮರುದಿನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಲಸಿಕೆ ಪಡೆಯುವವರು ಅನಗತ್ಯವಾಗಿ ಚಿಕಿತ್ಸಾಲಯಕ್ಕೆ ಓಡಾಡದಂತೆ ಕ್ರಮ ವಹಿಸಲು ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಜಿಲ್ಲೆಯಲ್ಲಿ 60 ಕ್ಕಿಂತ ಹೆಚ್ಚು ವಯಸ್ಸಿನವರು ಹಾಗೂ ವಿವಿಧ ಕಾಯಿಲೆಗಳಿಂದ ಬಾಧಿ ತರಾಗಿರುವ 45 ವರ್ಷ ಮೇಲ್ಪಟ್ಟವರು ಸರ್ಕಾರ ಈಗಾಗಲೇ ಹೊರಡಿಸಿರುವ ಮಾನದಂಡಗಳನ್ನು ಅನುಸರಿಸಿ ಹಾಗೂ ವೈದ್ಯರ ಸಲಹೆ ಮೇರೆಗೆ ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯುವವರಿಗೆ ಲಸಿಕೆಗಳನ್ನು ನೀಡಲು ಆರೋಗ್ಯ ಇಲಾಖೆಯು ಸಕಲ ಸಿದ್ಧತೆ ಕೈಗೊಂಡಿದೆ ಎಂದರು.

ಲಸಿಕೆ ಪಡೆಯಲಿಚ್ಚಿಸುವವರು ತಮ್ಮ ವೈಯಕ್ತಿಕ ವಿವರಗಳನ್ನು ಆನ್‌ಲೈನ್‌ ಮೂಲಕ ಅಥವಾ ಆರೋಗ್ಯ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ಹೆಸರು ನೋಂದಾಯಿಸಿಕೊಂಡು ಉಚಿತವಾಗಿ ಲಸಿಕೆ ಪಡೆಯಬಹುದಾಗಿದೆ. ಅಲ್ಲದೇ ನಗರದ ಆಯ್ದ 12 ಖಾಸಗಿ ಆಸ್ಪತ್ರೆಗಳಲ್ಲಿಯೂ ಲಸಿಕೆ ಲಭ್ಯವಿದ್ದು, 250 ರೂ. ಪಾವತಿಸಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು. ಜಿಲ್ಲೆಯ 124 ಉಪ ಆರೋಗ್ಯ ಕೇಂದ್ರಗಳಲ್ಲಿ, 103 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, 7 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, 6 ತಾಲೂಕು ಆಸ್ಪತ್ರೆಗಳಲ್ಲಿ, ಸಿಮ್ಸ್‌, ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜುಗಳ ತಲಾ ಒಂದು ಕೇಂದ್ರಗಳಲ್ಲಿ ಹಾಗೂ ಸ್ಥಳೀಯ ನೋಂದಾಯಿತ 12 ಖಾಸಗಿ ಆಸ್ಪತ್ರೆಗಳು ಸೇರಿದಂತೆ ಒಟ್ಟು 173 ಕೇಂದ್ರಗಳಲ್ಲಿ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದರು. ಸಿಮ್ಸ್‌ನಲ್ಲಿ ಕೊರತೆಯಿರುವ ಸಿಬ್ಬಂದಿ ಭರ್ತಿ ಮಾಡಿಕೊಳ್ಳಲು ತಾತ್ಕಾಲಿಕ ಅನುಮತಿ ದೊರೆತಿದ್ದು, ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಸಿಮ್ಸ್‌ನ ಆಡಳಿತ ವ್ಯವಸ್ಥೆ ಹಾಗೂ ಕೋವಿಡ್‌ ನಿಯಂತ್ರಣ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಏ. 17ರಂದು ಬೆಳಿಗ್ಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.

ಸಭೆಯಲ್ಲಿ ಡಿಸಿ ಕೆ.ಬಿ. ಶಿವಕುಮಾರ್‌, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿ ಕಾರಿ ಎಂ.ಎಲ್‌. ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ರಾಜೇಶ್‌ ಸುರಗೀಹಳ್ಳಿ, ಸಿಮ್ಸ್‌ ಆಡಳಿತಾಧಿಕಾರಿ ಡಾ| ಸಿದ್ಧಪ್ಪ, ಡಾ| ಶಂಕರಪ್ಪ, ಡಾ| ನಾಗರಾಜ್‌ ನಾಯ್ಕ, ಡಾ| ಶಮಾ ಸೇರಿದಂತೆ ವೈದ್ಯಾ ಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next