Advertisement

ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿಲ್ಲ

07:03 AM Jul 09, 2020 | Lakshmi GovindaRaj |

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ. ರೈತರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿ ಬಿ.ಸಿ.ಪಾಟೀಲ್‌ ಮನವಿ ಮಾಡಿದ್ದಾರೆ. ಈ  ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿ, ಅಗತ್ಯ ಪ್ರಮಾಣದಷ್ಟು ರಸಗೊಬ್ಬರವನ್ನು ಈಗಾಗಲೇ ರಾಜ್ಯಗಳಿಗೆ ಪೂರೈಸಿದೆ.

Advertisement

ರಾಜ್ಯದಲ್ಲಿ ಯಾವುದೇ ಕೊರತೆಯಾಗದಂತೆ  ಕ್ರಮವಹಿಸಲಾಗಿದೆ ಎಂದು ಹೇಳಿದ್ದಾರೆ. 2020-21 ನೇ ಸಾಲಿನ ಮುಂಗಾರು ಹಂಗಾಮಿನ ಏಪ್ರಿಲ್‌ 1 ರಿಂದ ಜುಲೈ 6 ರವರೆಗೆ ಯೂರಿಯಾ ರಸಗೊಬ್ಬರಕ್ಕೆ 4.98 ಲಕ್ಷ ಮೆಟ್ರಿಕ್‌ ಟನ್‌ ಬೇಡಿಕೆ ಇದ್ದು, 4,35,700 ಮೆ.ಟನ್‌ ಸರಬರಾಜಾಗಿದ್ದು  2,06,750 ಮೆ.ಟನ್‌ ದಾಸ್ತಾನಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಸುಮಾರು 1,55,468 ಮೆಟ್ರಿಕ್‌ ಟನ್‌ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದೆ.

ಎಲ್ಲಾ ಜಿಲ್ಲೆಗಳಲ್ಲಿಯೂ ಸುಮಾರು 2,06, 740 ಟನ್‌ ದಾಸ್ತಾನಿದೆ. ಮೇ, ಜೂನ್‌ ಅವಧಿಯಲ್ಲಿ ರಾಜ್ಯಾದ್ಯಂತ  ನಿರೀಕ್ಷೆಗಿಂತ ಉತ್ತಮ ಮಳೆಯಾಗಿದ್ದರಿಂದ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬೇಡಿಕೆ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ. ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಬಂದರೂ  ಇಲಾಖೆ ಪೂರೈಸಲಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next