Advertisement

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ರಸಗೊಬ್ಬರದ ಕೊರತೆಯಿಲ್ಲ: ಸದಾನಂದ ಗೌಡ

06:13 PM Jul 06, 2020 | keerthan |

ಬೆಂಗಳೂರು: ದೇಶದಲ್ಲಿ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

Advertisement

ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿ, ಅಗತ್ಯ ಪ್ರಮಾಣದಷ್ಟು ರಸಗೊಬ್ಬರವನ್ನು ಈಗಾಗಲೇ ರಾಜ್ಯಗಳಿಗೆ ಪೂರೈಸಿ, ದಾಸ್ತಾನು ಮಾಡಲಾಗಿದೆ ಎಂದು ಅವರು ಹೇಳಿದರು.

ಹೊಸದಿಲ್ಲಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಕೇಂದ್ರ ಸಚಿವರು ಈ ಭರವಸೆ ನೀಡಿದರು. ರಾಜ್ಯದಲ್ಲಿ ಬೇಡಿಕೆಗೆ ತಕ್ಕಂತೆ ಅಗತ್ಯ ರಸಗೊಬ್ಬರ ಪೂರೈಕೆಗೆ ಭರವಸೆ ನೀಡಿದರು.

ರಸಗೊಬ್ಬರ ಸಚಿವಾಲಯ ನಿರಂತರವಾಗಿ ರಸಗೊಬ್ಬರ ಲಭ್ಯತೆಯ ಬಗ್ಗೆ ತೀವ್ರ ನಿಗಾ ಇರಿಸಿದೆ ಮತ್ತು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಂದ ಯೂರಿಯಾ ಪೂರೈಕೆಗೆ ಬೇಡಿಕೆ ಎದುರಾದರೆ ಅದನ್ನು ಪೂರೈಸಲು ಬದ್ಧವಿದೆ ಎಂದರು. ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ರೈತರಿಗೆ ಸಕಾಲದಲ್ಲಿ ಕೈಗೆಟಕುವ ದರದಲ್ಲಿ ಸೂಕ್ತ ಪ್ರಮಾಣದ ರಸಗೊಬ್ಬರ ಪೂರೈಕೆಯನ್ನು ಖಾತ್ರಿಪಡಿಸಲು ಬದ್ಧವಾಗಿದೆ ಎಂದು ಅವರು ಹೇಳಿದರು.

ಮೇ ಮತ್ತು ಜೂನ್ ಅವಧಿಯಲ್ಲಿ ದೇಶಾದ್ಯಂತ ನಿರೀಕ್ಷೆಗಿಂತ ಉತ್ತಮ ಮಳೆಯಾಗಿದ್ದರಿಂದ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಡಿಬಿಟಿ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ.

Advertisement

ಹೆಚ್ಚುವರಿಯಾಗಿ ರಸಗೊಬ್ಬರಕ್ಕೆ ಯಾವುದೇ ಬೇಡಿಕೆ ಎದುರಾದರೂ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಜೊತೆ  ಸಮಾಲೋಚಿಸಿ, ದೇಶೀಯ ಉತ್ಪಾದನೆ ಹೆಚ್ಚಳ ಮತ್ತು ಆಮದು ಮೂಲಕ ಪೂರೈಕೆ ಮಾಡಲಾಗುವುದು ಎಂದು ಸಚಿವ ಸದಾನಂದ ಗೌಡ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next