Advertisement
ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ತಾಲೂಕು ದಂಡಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರನ್ನು ಒಳಗೊಂಡ ತಂಡ ಒಂದಡೆ ಭೇಟಿ ನೀಡಿ ಪರಿಶೀಲಿಸಿತ್ತು. ಪುತ್ತೂರು ಶಾಸಕ ಸಂಜೀವ ಮಠಂದೂರು, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಸಂಸದ ನಳಿನ್‌ಕುಮಾರ್ ಕಟೀಲು ಅವರು ನಟ್ಟಿಬೈಲು ಸಹಿತ ಹಲವು ಕಡೆಗಳಲ್ಲಿ ಸಂಭವಿಸಿದ ನಷ್ಟದ ಕುರಿತು ಅಧ್ಯಯನ ನಡೆಸಿ, ಪ್ರಾಕೃತಿಕ ವಿಕೋಪದಡಿ ಪರಿಹಾರ ಒದಗಿಸುವ ಭರವಸೆ ನೀಡಿದ್ದರು. ಅದು ಇನ್ನೂ ಈಡೇರಿಲ್ಲ.
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಷ್ಟವನ್ನು ಪರಿಶೀಲಿಸಿದ್ದಾರೆ. ಈವರೆಗೂ ಪರಿಹಾರ ಬಂದಿಲ್ಲ ಎಂದು ಗ್ರಾ.ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ ಹರೀಶ್ ನಟ್ಟಿಬೈಲು ಹೇಳಿದ್ದಾರೆ.
Related Articles
ಕಳೆದ ವರ್ಷ ಪ್ರಾಕೃತಿಕ ವಿಕೋಪದಡಿ ಅರ್ಜಿ ಸಲ್ಲಿಸಿದವರಿಗೆ ಈಗಾಗಲೇ ಹಿಂಬರಹ ಕೊಟ್ಟಿದ್ದು, ಅತಿವೃಷ್ಟಿ ಪರಿಹಾರ ಯೋಜನೆಯಡಿ ಪರಿಹಾರವನ್ನು ವಿತರಿಸಲಾಗಿದೆ. ಅದನ್ನು ಸರಕಾರದಿಂದ ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ಜಮೆ ಮಾಡಲಾಗಿದೆ.
– ಚಂದ್ರ ನಾೖಕ್, ಗ್ರಾಮ ಕರಣಿಕರು, ಉಪ್ಪಿನಂಗಡಿ
Advertisement