ಬಳ್ಳಾರಿ: ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಸದ್ಯ ಯಾವುದೇ ಚಿಂತನೆಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುರುವಾರ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಮಾತನಾಡಿ,ಈ ವರ್ಷ ಗ್ಯಾರಂಟಿ ಯೋಜನೆಗಳಿಗೆ 65 ಸಾವಿರ ಕೋಟಿ ಕೊಡಬೇಕು. ರಾಜ್ಯದ ಅಭಿವೃದ್ಧಿಗಾಗಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡಲಾಗಿದೆ. ಕಳೆದ ಹತ್ತು ವರ್ಷದಲ್ಲಿ72 ರೂ. ಇದ್ದ ಪೆಟ್ರೋಲ್ ಬೆಲೆ ಈಗ 100ರೂ. ಆಗಿದೆ. ಕೇಂದ್ರ ಸರಕಾರದಿಂದ ಈ ಹಿಂದೆ ಹೆಚ್ಚಿಸಲಾಗಿದೆ. ರಾಜ್ಯ ಅಭಿವೃದ್ಧಿಗಾಗಿ ಏರಿಕೆ ಮಾಡಲಾಗಿದೆ ಹೊರತು ಬೇರೆ ಉದ್ದೇಶವಿಲ್ಲ. ಗ್ಯಾರಂಟಿ ಯೋಜನೆಗಳಿಗಾಗಿ ಯಾವುದೇ ಕಾರಣಕ್ಕೂ ಬಳಸುತ್ತಿಲ್ಲ. ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ವಿರೋಧ ಪಡಿಸಲಿ ಎಂದು ತಿರುಗೇಟು ನೀಡಿದರು.
ಸರಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭ ವಿರೋಧಿಸಿ ಅಂಗನವಾಡಿ ಕೇಂದ್ರದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.
ಕೇಂದ್ರದಿಂದ ತೆರಿಗೆ ಹಂಚಿಕೆ ವ್ಯಾಪ್ತಿ ಕಡಿಮೆಯಾಗಿದೆ. 1.87ಲಕ್ಷ ಕೋಟಿ ಅನ್ಯಾಯವಾಗಿದೆ. ಈ ಬಗ್ಗೆ ಈ ಹಿಂದೆ ಇದ್ದ ಒಬ್ಬ ಎಂಪಿ ಬಾಯಿ ಬಿಟ್ಟಿದ್ದಾರಾ?ರಾಜ್ಯಕ್ಕೆ ಆರು ತಿಂಗಳಾದರೂ ಬರ ಪರಿಹಾರ ಕೊಡದಿದ್ದರೂ ಯಾರು ಮಾತನಾಡಲಿಲ್ಲ. ಬೆಂಗಳೂರು ಅಭಿವೃದ್ಧಿಗೆ, ಭ್ರದ್ರಾ ಮೇಲ್ದಂಡೆ ಯೋಜನೆಗೂ ಅನುದಾನ ಕೊಟ್ಟಿಲ್ಲ. ಈ ಬಗ್ಗೆ ಡಿ.ಕೆ.ಸುರೇಶ್ ಮಾತನಾಡಿದ ತಕ್ಷಣ ದೇಶ ವಿಭಜನೆ ಎಂದು ಹರಿಹಾಯ್ದರು ಎಂದರು
ತುಂಗಭದ್ರಾ ಜಲಾಶಯದ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಬಗ್ಗೆ ಆಂಧ್ರ, ತೆಲಂಗಾಣ, ರಾಜ್ಯ ಸೇರಿ ಮೂರು ರಾಜ್ಯದ ಜತೆ ಮಾತನಾಡಿ ತೀರ್ಮಾನಕ್ಕೆ ಬರಲಾಗುವುದು ಎಂದರು.
ಸಂಡೂರು ತಾಲೂಕಿನ ದೇವದಾರಿಯಲ್ಲಿ ಗಣಿಗಾರಿಕೆ ಆರಂಭದ ಬಗ್ಗೆ ಕುಮಾರಸ್ವಾಮಿ ಅವರೇ ಅನುಮತಿ ನೀಡಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.