Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಹೇಳಿಕೆ ನನಗೆ ಗೊತ್ತಿಲ್ಲ, ರಾಜ್ಯಾಧ್ಯಕ್ಷರ ಸೀಟ್ ಖಾಲಿ ಇಲ್ಲ. ಸದ್ಯಕ್ಕೆ ಅವರನ್ನು ತೆಗೆಯುವ ಸಂದರ್ಭ ಕಾಣುತ್ತಿಲ್ಲ. ಪಾರ್ಲಿಮೆಂಟ್ ಚುನಾವಣೆ ಇದೆ, ರಾಷ್ಟ್ರಾಧ್ಯಕ್ಷರ ತೀರ್ಮಾನ ಗೊತ್ತಿಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನನ್ನ ಬಳಿ ಯಾವ ಮಾಹಿತಿ ಇಲ್ಲ ಎಂದರು.
Related Articles
Advertisement
ಡಿ ಕೆ ಶಿವಕುಮಾರ್ ಸಿಎಂ ಅಲ್ಲ, ಆಕ್ಟಿಂಗ್ ಸಿಎಂ ರೀತಿ ಮಾಡುತ್ತಿದ್ದಾರೆ. ಡಿಕೆಶಿ ಅವರದ್ದು ಒಂದು ರೀತಿ ಅತಿರೇಕದ ನಡೆ. ಸಿದ್ದರಾಮಯ್ಯ ಬಿಟ್ಟುಕೊಡಲ್ಲ, ನಂಗೆ ಸಿಎಂ ಸ್ಥಾನ ಸಿಗುವುದಿಲ್ಲ ಎನ್ನುವ ಗ್ಯಾರಂಟಿಯಿದೆ. ನಾನೇ ಸಿಎಂ ಎಂದು ಸಿದ್ದರಾಮಯ್ಯ ದೆಹಲಿಯಲ್ಲಿ ಹೇಳಿದ್ದಾರೆ. ಇದೇನು ಸಮ್ಮಿಶ್ರ ಸರ್ಕಾರವೇ ಎಂದು ಯಾರಿಗೆ ಹೇಳಿದ್ದಾರೆ, ಅದು ಡಿಕೆಶಿಗೆ ಹೇಳಿದ್ದು ಎಂದು ಜಗಜ್ಜಾಹೀರು ಎಂದು ಅಶೋಕ್ ಹೇಳೀದರು.
ಡಿಕೆ ಶಿವಕುಮಾರ್ ಈಗಿನಿಂದಲೇ ಓವರ್ಟೇಕ್ ಮಾಡಿ ಏನಾದರೂ ಕಿರಿಕಿರಿ ಮಾಡಲು ಹೊರಟಿದ್ದಾರೆ. ಕಿರಿಕಿರಿ ಬೀದಿಗೆ ಬಂದರೆ ಈ ಸರಕಾರ ಬಿದ್ದು ಹೋಗುತ್ತದೆ.
ಸಿಎಂ ಆದವರು ಹಿಂದಿನ ಸಿಎಂರನ್ನು ಭೇಟಿ ಮಾಡುವುದು ಮಾಮೂಲಿ. ನಾನು ಡಿಸಿಎಂ ಆಗಿದ್ದೆ, ಆದರೆ ನಿವೃತ್ತ ಮುಖ್ಯಮಂತ್ರಿಯನ್ನು ಭೇಟಿ ಮಾಡಿಲ್ಲ ಎಂದು ಅಶೋಕ್ ಹೇಳಿದರು.