Advertisement

ಕನ್ನಡ ಕಡ್ಡಾಯ ಕಲಿಕೆ ಕುರಿತು ಪರಿಶೀಲನಾ ವರದಿಯೇ ಇಲ್ಲ

06:55 AM Apr 08, 2018 | |

ಬೆಂಗಳೂರು : ಪ್ರಸಕ್ತ ಸಾಲಿನಿಂದ ರಾಜ್ಯದ ಎಲ್ಲಾ ಮಾದರಿಯ ಶಾಲೆಗಳಲ್ಲೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅದರ ಅನುಷ್ಠಾನದ ಕುರಿತು ಪರಿಶೀಲನಾ ವರದಿ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಉಪ ನಿರ್ದೇಶಕರಿಗೆ ಸೂಚಿಸಲಾಗಿತ್ತು. ಆದರೆ, ಈವರಗೂ ಯಾವ ಅಧಿಕಾರಿಯೂ ಈ ಸಂಬಂಧ ಮಾಹಿತಿಯನ್ನು ಇಲಾಖೆಗೆ ನೀಡಿಲ್ಲ.

Advertisement

ಕನ್ನಡ ಭಾಷಾ ಕಲಿಕಾ ನಿಯಮ 2017ರ ಅನ್ವಯ ರಾಜ್ಯಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್‌ಇ ಸೇರಿದಂತೆ ಎಲ್ಲಾ ಶಾಲೆಗಳಲ್ಲೂ 2017-18ನೇ ಸಾಲಿನಿಂದ 1ರಿಂದ 10ನೇ ತರಗತಿಯ ವರೆಗೂ ಕನ್ನಡವನ್ನು ಒಂದು ಭಾಷೆಯಾಗಿ ಹಂತ ಹಂತವಾಗಿ ಅನುಷ್ಠಾನ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಇದರ ಅನುಪಾಲನಾ ವರದಿಯನ್ನು ಇಲಾಖೆಗೆ ನೀಡುವಂತೆ ಬಿಇಒ ಹಾಗೂ ಡಿಡಿಪಿಐಗಳಿಗೆ ಆದೇಶಿಸಲಾಗಿತ್ತು. ಆದರೆ, ಯಾವ ಅಧಿಕಾರಿಯೂ ಮಾಹಿತಿ ನೀಡದ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸ ಸುತ್ತೋಲೆ ಹೊರಡಿಸಿದೆ.

ರಾಜ್ಯದಲ್ಲ ಎಲ್ಲಾ ಬಿಇಒ ಹಾಗೂ ಡಿಡಿಪಿಐಗಳು ತಮ್ಮ ವ್ಯಾಪ್ತಿಯ ಶಾಲೆಗೆ ಭೇಟಿ ನೀಡಿ, ಕನ್ನಡ ಕಡ್ಡಾಯ ಕಲಿಯ ಬಗ್ಗೆ ಆಯಾ ಶಾಲೆಯ ಮುಖ್ಯಸ್ಥರಿಂದ ದೃಢಿಕರಣ ಪಡೆದು ಏ.12ರೊಳಗೆ ಇಲಾಖೆಯ ಕೇಂದ್ರ ಕಚೇರಿಗೆ ಸಲ್ಲಿಸುವಂತೆ ನಿರ್ದೇಶಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next