Advertisement

ಯಡಿಯೂರಪ್ಪನವರ ಡಿಕ್ಷನರಿಯಲ್ಲಿ ನಿವೃತ್ತಿ ಅನ್ನುವ ಪದವೇ ಇಲ್ಲ: ವಿಜಯೇಂದ್ರ

03:55 PM Jul 22, 2022 | Team Udayavani |

ಶಿವಮೊಗ್ಗ : ‘ತಂದೆಯವರ ಮಾರ್ಗದರ್ಶನ ಹಾಗೂ ಪಕ್ಷದ ನಿರ್ಧಾರದಂತೆ ನಡೆದುಕೊಳ್ಳುತ್ತೇನೆ, ಅದನ್ನು ಆಧರಿಸಿಯೇ ನಾನು ಮುಂದಿನ ನಿರ್ಧಾರ ಮಾಡುತ್ತೇನೆ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಹೇಳಿಕೆ ನೀಡಿದ್ದಾರೆ.

Advertisement

ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರ ಬಿಟ್ಟು ಕೊಟ್ಟ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ರಾಜ್ಯ ಉಪಾಧ್ಯಕ್ಷನಾಗಿ ರಾಜ್ಯ ಪ್ರವಾಸ ಮಾಡುವುದು ನನ್ನ ಮೊದಲ ಕರ್ತವ್ಯ. ಹಿಂದಿನಿಂದಲೂ ಅದನ್ನು ಮಾಡಿದ್ದೇನೆ.ಮುಂದೆಯೂ ಮಾಡುತ್ತೇನೆ. ಶಿಕಾರಿಪುರದ ಮುಖಂಡರು, ಕಾರ್ಯಕರ್ತರು ತಂದೆಯ ಮೇಲೆ ಒತ್ತಡ ಹೇರಿದ್ದರು. ತಿಂಗಳ ಹಿಂದೆ ಬೆಂಗಳೂರಿಗೂ ಬಂದು ಒತ್ತಡ ಹಾಕಿದ್ದರು.ಅದರಂತೆ ತಂದೆಯವರು ಇಂದು ತೀರ್ಮಾನ ಪ್ರಕಟಿಸಿದ್ದಾರೆ. ಇದರ ಜತೆ ಪಕ್ಷ ಏನು ತೀರ್ಮಾನ ಮಾಡುತ್ತದೆ ಅದನ್ನು ಅಧರಿಸಿ ನಾನು ನಿರ್ಧಾರ ಮಾಡುತ್ತೇನೆ. ಈ ವಿಚಾರದಲ್ಲಿ ನಾನು ತಂದೆ ಮೇಲೆ ಒತ್ತಡ ಹಾಕುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

ಯಡಿಯೂರಪ್ಪನವರಿಗೆ ನಿವೃತ್ತಿ ಅನ್ನುವುದು ಸಂಬಂಧ ಇಲ್ಲ, ಅವರ ಡಿಕ್ಷನರಿಯಲ್ಲಿ ನಿವೃತ್ತಿ ಅನ್ನುವ ಪದವೇ ಇಲ್ಲ. ಹಿಂದೆ ಕೂಡ ಬಿಜೆಪಿ ಸಂಘಟನೆಗಾಗಿ ಕೆಲಸ ಮಾಡಿದ್ದರು, ಮುಂದೆಯೂ ಮಾಡುತ್ತಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ವೇಳೆ ಹೇಳಿದ್ದರು. ಬಿಜೆಪಿಯನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರುತ್ತೇನೆ ಎಂದು. ಈ ಬಗ್ಗೆ ವಿಪಕ್ಷಗಳಿಗೆ ಸವಾಲು ಕೂಡ ಹಾಕಿದ್ದಾರೆ.ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೂಡ ಮಾಡುತ್ತಾರೆ.ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮ ಹಾಕುತ್ತಾರೆ ಎಂದರು.

ಸೈಡ್ಲೈನ್ ಸತ್ಯಕ್ಕೆ ದೂರ

ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿ, ”ಯಡಿಯೂರಪ್ಪನವರು ನಿನ್ನೆ ದಿನ ಮಂಡ್ಯದಲ್ಲಿ ಹೇಳಿದ್ದರು, 150 ಸೀಟು ಗೆದ್ದು ಬಿಜೆಪಿ ಅಧಿಕಾರಕ್ಕೆ ತರುತ್ತೇವೆ ಎಂದು.ಬದುಕಿರುವವರೆಗೆ ಬಿಜೆಪಿಯ ಆಸ್ತಿ ಅವರು, ಯಡಿಯೂರಪ್ಪ ನಿವೃತ್ತಿ ಪ್ರಶ್ನೆಯೇ ಇಲ್ಲ. ಬಿಜೆಪಿ ಕಟ್ಟಿ ಬೆಳೆಸಿದ ಸರ್ವೋಚ್ಚ ನಾಯಕರಾದ ಅವರು ಸೈಡ್ಲೈನ್ ಆಗುವುದು ಸತ್ಯಕ್ಕೆ ದೂರವಾದ ಮಾತು” ಎಂದರು.

Advertisement

ಅರ್ಹತೆ ಇದೆಯೋ ಅವರಿಗೆ ಅವಕಾಶ

ವಿಧಾನಸೌಧದಲ್ಲಿ ಸಚಿವ ಮುರಗೇಶ್ ನಿರಾಣಿ ಪ್ರತಿಕ್ರಿಯಿಸಿ, ‘ಐದು ದಶಕಗಳಿಂದ ಯಡಿಯೂರಪ್ಪ ಪಕ್ಷ ಕಟ್ಟಿದ್ದಾರೆ.ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಸ್ಟ್ರಾಂಗ್ ಮಾಡಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ.ಯಡಿಯೂರಪ್ಪ ಮುಟ್ಟದ ಗ್ರಾಮವಿಲ್ಲ.ಅವರು ವಿಧಾನಸೌಧದಲ್ಲಿ ಮಾತಾಡುತ್ತಿದ್ದರೆ ಇಡೀ ವಿಧಾನಸೌಧ ಗಡ ಗಡ ನಡುಗುತ್ತದೆ.ಇದೀಗ ಶಿಕಾರಿಪುರ ಕ್ಷೇತ್ರ ವಿಜೇಯಂದ್ರಗೆ ಬಿಟ್ಟುಕೊಟ್ಟಿದ್ದಾರೆ.ಇದರಲ್ಲಿ ತಪ್ಪಿಲ್ಲ. 2023 ಚುನಾವಣೆ ಪ್ರಚಾರಕ್ಕೆ ಯಡಿಯೂರಪ್ಪ ಅವರು ಬರುತ್ತಾರೆ. ಸ್ಪರ್ಧೆ ಮಾಡುವುದಿಲ್ಲ ಅಂದಿದ್ದಾರೆ’ ಎಂದರು.

‘ರಾಜಕಾರಣಕ್ಕೆ ಬಿಜೆಪಿಯಲ್ಲಿ ಅವಕಾಶ ಇಲ್ಲ’ ಎಂದು ಪ್ರಧಾನಿ ಮೋದಿ ಹೇಳಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಯಡಿಯೂರಪ್ಪ ಅವರಷ್ಟೇ ಸಂಘಟನಾ ಚಾತುರ್ಯ ವಿಜೇಯಂದ್ರಗೆ ಇದೆ, ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ವಿಜೇಯಂದ್ರ ಬೆಳೆದಿದ್ದಾರೆ. ಯಾರಿಗೆ ಅರ್ಹತೆ ಇದೆಯೋ ಅವರಿಗೆ ಅವಕಾಶ ಕೊಡಲಾಗುತ್ತದೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next