Advertisement
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಸರ್ಕಾರಿ ಯೋಜನೆಗಳ ಅರಿವು ಮೂಡಿಸಿ: ಶಿಕ್ಷಣ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ, ಆರೋಗ್ಯ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇತರೆ ಇಲಾಖೆಯಲ್ಲಿ ಬರುವ ಯೋಜನೆಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಶಾಲಾ-ಕಾಲೇಜುಗಳಿಗೆ ಹಾಗೂ ಗ್ರಾಮೀಣ ಪ್ರದೇಶಕ್ಕೆ ಭೇಟಿ ನೀಡಿ ಜನರಲ್ಲಿ ಅರಿವು ಮೂಡಿಸಬೇಕು.
ಸರಕಾರದ ಯೋಜನೆಗಳು ಸದುಪಯೋಗ ವಾಗಲು ಸಾರ್ವಜನಿಕರಿಗೆ ಯೋಜನೆಗಳ ಬಗ್ಗೆ ಅರಿವು ಅಗತ್ಯವಾಗಿದೆ. ತಿಂಗಳಲ್ಲಿ ನಾಲ್ಕೈದು ದಿನ ಹಳ್ಳಿ ಕಡೆ ಹೋಗಿ ವಾಸ್ತವ ಸ್ಥಿತಿ ನೋಡಬೇಕು. ಸಭೆ-ಸಮಾರಂಭಗಳನ್ನು ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಜಿಪಂ ಅಧ್ಯಕ್ಷರು ತಿಳಿಸಿದರು.
ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದರ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿರುವ ಏಜೆನ್ಸಿಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.
ಫಲಿತಾಂಶ ಹೆಚ್ಚಳ ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕಾಗಿ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಕೇಳಿದಾಗ, ಜಿಲ್ಲೆಯ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಸ್ಥಾನಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲೆ ಮುಖ್ಯೋಪಾಧ್ಯಾಯರಿಗೆ ಸೂಚಿಸಲಾಗಿದೆ. ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಹಾಗೂ ಫಲಿತಾಂಶದ ಹೆಚ್ಚಳಕ್ಕಾಗಿ ಡಯಟ್ನಿಂದ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಮಕ್ಕಳಲ್ಲಿ ಗುಂಪು ಅಧ್ಯಯನ, ಕಂಪ್ಯೂಟರ್, ಪ್ರಾಜೆಕ್ಟರ್ ಮೂಲಕ ಹಾಗೂ 8ನೇ ತರಗತಿಯಿಂದಲೇ ಮಕ್ಕಳಿಗೆ ಇಂಗ್ಲಿಷ್, ಹಿಂದಿ ಸೇರಿದಂತೆ ಇತರೆ ವಿಷಯಗಳ ನಿರೂಪಣೆ ಶೈಲಿ ಹೇಳಿಕೋಡಲಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ ಬಿರಾದಾರ ಮಾಹಿತಿ ನೀಡಿದರು.
ಕುಟುಂಬ ಕಲ್ಯಾಣ ಯೋಜನೆ ಕುರಿತು ಆಶಾ ಕಾರ್ಯಕರ್ತೆಯರ ಮೂಲಕ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೊರತೆ ಇರುವ ವೈದ್ಯರನ್ನು ಗುತ್ತಿಗೆ ಆಧಾರ ಮೇಲೆ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಡಾ| ಭಗವಂತ ಅನವಾರ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ಎಸ್. ರೋಟ್ನಡಗಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ ಕರಿಗಾರ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸುನೀಲ ಬಿಸ್ವಾಸ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.