Advertisement

ಸಿದ್ದರಾಮಯ್ಯರನ್ನ ಸೋಲಿಸೋಕೆ ನಮ್ಮ ಮನೆಯಲ್ಲೇ ಕಾರ್ಯ ತಂತ್ರ ನಡೆದಿತ್ತು : ಶ್ರೀನಿವಾಸಪ್ರಸಾದ್

04:49 PM Jul 04, 2021 | Team Udayavani |

ಮೈಸೂರು : ಬಿಜೆಪಿ ನಾಯಕತ್ವ ಬದಲಾವಣೆ ವಿಚಾರ ಮುಗಿದ ಅಧ್ಯಾಯ. ಅರುಣ್ ಸಿಂಗ್ ಕರ್ನಾಟಕಕ್ಕೆ ಬಂದು ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ತಿಳಿಸಿದ್ದಾರೆ. ಹೈಕಮಾಂಡ್ ಮುಂದೆ ಯಾವ ತೀರ್ಮಾನ ತೆಗೆದುಕೊಳ್ಳುವುದೋ ನೋಡಬೇಕು. ಯಡಿಯೂರಪ್ಪ ಕೂಡ ಹೈಕಮಾಂಡ್ ನಿರ್ಧಾರಕ್ಕೆ ಬದ್ದನಿದ್ದೇನೆ ಎಂದಿದ್ದಾರೆ ಎಂದು ಮೈಸೂರಿನಲ್ಲಿ ಸಂಸದ ಶ್ರೀನಿವಾಸಪ್ರಸಾದ್ ಹೇಳಿಕೆ ನೀಡಿದ್ದಾರೆ.

Advertisement

ಬಿಜೆಪಿಗೆ ನಾವು ಹೊಸಬರು, ಪಕ್ಷ ಕಟ್ಟುವುದರಲ್ಲಿ ಯಡಿಯೂರಪ್ಪನವರ ಅಪಾರ ಶ್ರಮವಿದೆ. ನಾವು ಬಿಜೆಪಿಗೆ ಬಂದಿದ್ದರಿಂದ ಪಕ್ಷಕ್ಕೆ ಸಾಕಷ್ಟು ಶಕ್ತಿ ಬಂದಿದೆ. ನೆಲೆಯೇ ಇಲ್ಲದ ಕ್ಷೇತ್ರಗಳಲ್ಲಿ ಬಿಜೆಪಿ ಶಕ್ತಿ ವೃದ್ಧಿಯಾಗಿದೆ. ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ 3 ಲಕ್ಷ ಅಂತರದಿಂದ ಗೆಲ್ಲುವ ಸಾಮರ್ಥ್ಯ ವಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ ಎಂದರು.

ಹಿಂದೆ ಸಿದ್ದರಾಮಯ್ಯ ಅವರನ್ನು ಸೋಲಿಸೋಕೆ ನಮ್ಮ ಮನೆಯಲ್ಲೇ ಕಾರ್ಯ ತಂತ್ರ ನಡೆದದ್ದು ಎಲ್ಲರಿಗೂ ಗೊತ್ತಿರೋ ಸಂಗತಿ. ಹಾಗೆಂದು ಈಗಲೂ ನಮ್ಮ ಮನೆಯಲ್ಲೇ ಎಲ್ಲಾ ಕಾರ್ಯ ತಂತ್ರ ನಡೆಯುತ್ತೆ ಅನ್ನೋದನ್ನ ಒಪ್ಪಲಾರೆ. ರಮೇಶ್ ಜಾರಕಿಹೊಳಿ ಪ್ರಕರಣ ಎಸ್.ಐ.ಟಿ ಮುಂದೆ ತನಿಖೆ ನಡೆಯುತ್ತಿದೆ. ತನಿಖಾ ವರದಿ ನಂತರ ಅವರಿಗೆ ಮಂತ್ರಿ ಸ್ಥಾನ ಸಿಗಬಹುದು ಎಂದು ಮೈಸೂರಿನಲ್ಲಿ ಸಂಸದ ಶ್ರೀನಿವಾಸಪ್ರಸಾದ್ ಹೇಳಿಕೆ ನೀಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next