ಮುಂಬಯಿ :” 2024ರ ಲೋಕಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕರ್ನಾಟಕ, ಬಿಹಾರ ಮತ್ತು ಆಂಧ್ರಪ್ರದೇಶ ರಾಜ್ಯಗಳು ದೇಶದ ಭವಿಷ್ಯವನ್ನು ನಿರ್ಧರಿಸುವ ಮೂಲಕ ಅಧಿಕಾರ ಬದಲಾವಣೆಯಾಗಲಿದೆ” ಎಂದು ಶಿವಸೇನೆ (ಯುಬಿಟಿ) ರಾಜ್ಯಸಭಾ ಸಂಸದ ಸಂಜಯ್ ರಾವತ್ ಶುಕ್ರವಾರ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಸಂದರ್ಶನ ನೀಡಿದ ಅವರು, ”2024 ರ ನಂತರ ದೇಶದಲ್ಲಿ ಖಂಡಿತವಾಗಿಯೂ ಅಧಿಕಾರ ಬದಲಾವಣೆಯಾಗಲಿದೆ. ನಾನು ಇದನ್ನು ಅತ್ಯಂತ ಆತ್ಮವಿಶ್ವಾಸದಿಂದ ಹೇಳಬಲ್ಲೆ” ಎಂದರು.
”ಹಿಂದೂ-ಮುಸ್ಲಿಂ ಗಲಭೆಗಳನ್ನು ಪ್ರಚೋದಿಸುತ್ತಿರುವುದು ಬಿಜೆಪಿಯ ನಿಜವಾದ ಶಕ್ತಿ ಮತ್ತು ಚುನಾವಣಾ ಲಾಭಕ್ಕಾಗಿ ಭಾರತ ಮತ್ತು ಪಾಕಿಸ್ಥಾನದ ನಡುವೆ ಉದ್ವಿಗ್ನತೆಯ ವಾತಾವರಣವನ್ನು ಸೃಷ್ಟಿಸುತ್ತದೆ” ಎಂದರು.
”ಚೀನಾದ ಆಕ್ರಮಣಗಳ ಹೊರತಾಗಿಯೂ ಕೇಂದ್ರ ಸರಕಾರ ಮೌನವಾಗಿದೆ” ಎಂದರು. ”ಹಾಗಾದರೆ ಚೀನಾ ದೇಶದೊಳಗೆ ಅತಿಕ್ರಮಣ ಮಾಡಿರುವುದರಿಂದ ಭಾರತ ಮತ್ತು ಚೀನಾ ನಡುವೆ ಉದ್ವಿಗ್ನ ವಾತಾವರಣವನ್ನು ಏಕೆ ಸೃಷ್ಟಿಸಬಾರದು” ಎಂದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚೀನಾದ ಬಗ್ಗೆ ಒಂದು ಮಾತನ್ನೂ ಆಡಿಲ್ಲ” ಎಂದರು.
”ಬಿಜೆಪಿಯ ಹಿಂದುತ್ವ ಕದ್ದದ್ದು ಮತ್ತು ಬೋಗಸ್” ಎಂದರು.