Advertisement

ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ರೀನಿಂಗ್‌

06:32 AM Jun 19, 2020 | Suhan S |

ದಾಂಡೇಲಿ: ಪಿಯು ಇಂಗ್ಲಿಷ್‌ ಪರೀಕ್ಷೆ ಗುರುವಾರ ನಗರದ 2 ಕಾಲೇಜುಗಳಲ್ಲಿ ನಡೆಯಿತು. ಕೋವಿಡ್‌-19ರ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ಬರುವ ಮುನ್ನವೆ ಸ್ಯಾನಿಟೈಸರ್‌ ಸಿಂಪಡಿಸಲಾಗಿತ್ತು. ಮಕ್ಕಳ ಥರ್ಮಲ್‌ ಸ್ಕ್ರೀನಿಂಗ್‌ ಪರೀಕ್ಷೆ ನಡೆಸಲಾಯಿತು.

Advertisement

ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕುರಿತಂತೆ ಮಾಹಿತಿ ನೀಡಿದ ನಂತರವಷ್ಟೇ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಗೆ ಹೋಗಲು ಅನುವು ಮಾಡಿಕೊಡಲಾಯಿತು. ನಗರದ ಬಂಗೂರನಗರ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ 294 ವಿದ್ಯಾರ್ಥಿಗಳ ಪೈಕಿ 282 ವಿದ್ಯಾರ್ಥಿಗಳು ಹಾಜರಾಗಿದ್ದರು. ಗೈರು ಹಾಜರಾದ 12 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಕಾಯಂ ಗೈರು ಹಾಜರಿಯಲ್ಲಿದ್ದು, ಉಳಿದಿಬ್ಬರು ಪಕ್ಕದ ಕನ್ಯಾ ವಿದ್ಯಾಲಯದ ವಿದ್ಯಾರ್ಥಿನಿಯರಾಗಿದ್ದಾರೆ. ನಗರದ ಜೆವಿಡಿ ಪಿಯು ಕಾಲೇಜಿನಲ್ಲಿ ನಡೆದ ಪರೀಕ್ಷೆಯಲ್ಲಿ 370 ವಿದ್ಯಾರ್ಥಿಗಳು ಭಾಗವಹಿಸಬೇಕಿದ್ದು, 368 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. ಗೈರು ಹಾಜರಾದವರಲ್ಲಿ ಒಂದು ವಿದ್ಯಾರ್ಥಿ ಹೊರ ಜಿಲ್ಲೆಯವರಾಗಿದ್ದು, ಇನ್ನೊಬ್ಬ ವಿದ್ಯಾರ್ಥಿ ಅನಾರೋಗ್ಯಗೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗಿಲ್ಲ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next