Advertisement

ಜನ ಗುಂಪು ಸೇರುವ ಸಮಾರಂಭಗಳಲ್ಲಿ ತಾವು ಭಾಗಿಯಾಗಲಾರೆವು:  ಪ್ರತಿಜ್ಞೆ ಸ್ವೀಕಾರ

01:26 AM Oct 11, 2020 | mahesh |

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ಅತ್ಯಧಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 14 ದಿನಗಳ ಅವಧಿಯಲ್ಲಿ ಜನ ಗುಂಪು ಸೇರುವ ಯಾವುದೇ ಸಾರ್ವಜನಿಕ-ಖಾಸಗಿ ಸಮಾರಂಭಗಳಲ್ಲಿ ತಾವು ಮತ್ತು ತಮ್ಮ ಕುಟುಂಬದ ಸದಸ್ಯರು ಭಾಗಿಯಾಗುವುದಿಲ್ಲ ಎಂದು ಸರಕಾರಿ ಸಿಬಂದಿ ಮತ್ತು ಶಿಕ್ಷಕರು ಪ್ರತಿಜ್ಞೆ ಕೈಗೊಂಡಿದ್ದಾರೆ.

Advertisement

ಪೊಲೀಸರು, ಆರೋಗ್ಯ ಕಾರ್ಯಕರ್ತರು, ಸರಕಾರಿ ಸಿಬಂದಿ ಮೊದಲಾದವರಲ್ಲಿ ಕೋವಿಡ್‌ ಸೋಂಕು ಅಧಿಕ ಪ್ರಮಾಣದಲ್ಲಿ ಖಚಿತಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಕೊರೊನಾ ಕೋರ್‌ ಸಮಿತಿ ಸಭೆಯಲ್ಲಿ ಕೈಗೊಂಡಿರುವ ತೀರ್ಮಾನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರ ಆದೇಶ ಪ್ರಕಾರ ಈ ಕಾರ್ಯಕ್ರಮ ನಡೆಸಲಾಗಿದೆ.

ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಕಾರ್ಯಕ್ರಮದಲ್ಲಿ ಹೆಚ್ಚುವರಿ ದಂಡನಾಧಿಕಾರಿ ಎನ್‌.ದೇವಿದಾಸ್‌ ಪ್ರತಿಜ್ಞೆ ಪಠಿಸಿದರು. ಅರಣ್ಯ ವಿಭಾಗೀಯ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಅರಣ್ಯ ಅಧಿಕಾರಿ ಅನೂಪ್‌ ಕುಮಾರ್‌, ಜಿಲ್ಲಾ ವೈದ್ಯಕೀಯ ಕಚೇರಿಯಲ್ಲಿ ಆರ್‌.ಸಿ.ಎಚ್‌. ಅಧಿಕಾರಿ ಡಾ| ಮುರಳೀಧರ ನಲ್ಲೂರಾಯ, ಜಿಲ್ಲಾ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಧುಸೂದನನ್‌ ಎಂ. ಪ್ರತಿಜ್ಞೆ ಪಠಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next