Advertisement

Acid ban: ಆ್ಯಸಿಡ್‌ ನಿಷೇಧಕ್ಕೆ ಚಿಂತನೆ: ಅಗತ್ಯ ಇದ್ದಲ್ಲಷ್ಟೇ ಮಾರಾಟ- ಪರಮೇಶ್ವರ್‌

09:42 PM Mar 07, 2024 | Suhan S |

ಬೆಂಗಳೂರು: ರಾಜ್ಯದಲ್ಲಿ ಆ್ಯಸಿಡ್‌ ನಿಷೇಧ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರಿಗೆ ಗೃಹಸಚಿವ ಡಾ.ಜಿ. ಪರಮೇಶ್ವರ್‌ ಸೂಚಿಸಿದ್ದಾರೆ.

Advertisement

ಗುರುವಾರ ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಆ್ಯಸಿಡ್‌ ದುರ್ಬಳಕೆ ಆಗುತ್ತಿದೆ. ಇದರಿಂದ ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆ್ಯಸಿಡ್‌ ನಿಷೇಧ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದರು.

ಎಲ್ಲರ ಕೈಗೂ ಸುಲಭವಾಗಿ ಆ್ಯಸಿಡ್‌ ಸಿಗಬಾರದು. ಅಗತ್ಯತೆ ಇರುವರಿಗೆ ಮಾತ್ರ ಸಿಗಬೇಕು. ಈ ಕುರಿತು ಡಿಜಿ ಮತ್ತು ಐಜಿಪಿ ಅಲೋಕ್‌ ಮೋಹನ್‌ ಅವರು, ಇನ್ನೆರಡು ದಿನದಲ್ಲಿ ಸಂಬಂಧಪಟ್ಟ ಇಲಾಖೆ ಹಾಗೂ ಕೈಗಾರಿಕೆಗಳಿಗೆ ಪತ್ರ ಬರೆದು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಬಳಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಮೇಲೆ ಆ್ಯಸಿಡ್‌ ದಾಳಿ ನಡೆದಿತ್ತು. ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಕೈಗಾರಿಕೆ ಮತ್ತಿತರ ಅಗತ್ಯ ಇರುವವರಿಗೆ ಮಾತ್ರ ಆ್ಯಸಿಡ್‌ ಸಿಗುವಂತೆ ಮಾಡಲು ನಿರ್ಧರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next