Advertisement
ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಶಹರಿ ಸಮೃದ್ಧಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರ ವ್ಯಾಪ್ತಿಯ ಅರ್ಕಾವತಿ ನದಿ ಪಾತ್ರದ ಅಭಿವೃದ್ಧಿಗೆ ಈಗಾಗಲೇ ನಿರ್ಧರಿಸಲಾಗಿದೆ. ಇದೇ ಯೋಜನೆಯಲ್ಲಿ ವ್ಯಾಯಾಮ ಶಾಲೆ, ವಾಕಿಂಗ್ ಪಾಥ್ ನಿರ್ಮಾಣಕ್ಕೂ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
Related Articles
Advertisement
ರಾಮನಗರ ಅಭಿವೃದ್ಧಿಗೆ ಶ್ರಮ: ಉಪಚುನಾವಣೆಯ ವೇಳೆ ಹಲವು ಭಾಗಗಳಲ್ಲಿ ಮಹಿಳೆಯರು ಕುಡಿಯುವ ನೀರು ಹಾಗೂ ಚರಂಡಿ ವ್ಯವಸ್ಥೆ ಕುರಿತು ತಮ್ಮ ಗಮನ ಸೆಳೆದಿದ್ದರು. ಈ ಸಮಸ್ಯೆ ನಿವಾರಣೆಗಾಗಿ ಶ್ರಮಿಸುತ್ತಿರುವುದಾಗಿ ಹೇಳಿದರು. ತಾವು ಶಾಸಕಿಯಾಗಿ ಆಯ್ಕೆಯಾಗಿ 100 ದಿನ ಕಳೆದಿದೆ, ರಾಮನಗರ ಅಭಿವೃದ್ಧಿಗೆ ಶ್ರಮಿಸುವ ಭರವಸೆ ನೀಡಿದರು.
ಈ ವೇಳೆಯಲ್ಲಿ ನಗರಸಭೆ ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷೆ ಮಂಗಳಾ, ಸದಸ್ಯರಾದ ಚೇತನ್ ಕುಮಾರ್, ಲೋಹಿತ್ ಬಾಬು, ರವಿ, ಮಂಜುನಾಥ್, ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷ ರಾಜಶೇಖರ್, ಜೆಡಿಎಸ್ ರಾಜ್ಯ ವಕ್ತಾರ ಬಿ.ಉಮೇಶ್, ತಹಶೀಲ್ದಾರ್ ರಾಜು, ನಗರಸಭೆ ಪೌರಾಯುಕ್ತೆ ಶುಭಾ ಭಾಗವಹಿಸಿದ್ದರು. ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ: ರಾಮನಗರ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ, ಕಟ್ಟಡ ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಅನಿತಾ ಶನಿವಾರ ಭೂಮಿ ಪೂಜೆ ನೆರವೇರಿಸಿದರು. ತಾಲೂಕಿನ ಕೆಂಪನಹಳ್ಳಿ ಗೇಟ್ ಬಳಿ 2.30 ಕೋಟಿ ರೂ. ವೆಚ್ಚದ ಕೆಂಜಿಗನಹಳ್ಳಿ ಕಾಲೋನಿ ಮೂಲಕ ಕೆಂಪನಹಳ್ಳಿ ಬಿಎಂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು, ಬಾಲಕರ ಸರ್ಕಾರ ಪದವಿ ಪೂರ್ವ ಕಾಲೇಜು ಎ ಮತ್ತು ಬಿ ಬ್ಲಾಕ್‌ಗಳ ಕಟ್ಟಡ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ 9 ಕೋಟಿ 90 ಲಕ್ಷ ರೂ. ವೆಚ್ಚದಲ್ಲಿ ಎ ಮತ್ತು ಬಿ ಬ್ಲಾಕ್‌ಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ ಮಹಿಳಾ ಸರ್ಕಾರಿ ಪಾಲಿಟೆಕ್ನಿಕ್‌ನ 3 ಮತ್ತು 4ನೇ ಮಹಡಿ ಹಾಗೂ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರೆವೇರಿಸಿದರು. ಜಾನಪದ ಲೋಕದಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ಲೈಬ್ರರಿ ಹಾಗೂ ಕಾರ್ಯಾಗಾರ ಉದ್ಘಾಟಿಸಿದರು. ನಗರಸಭೆಯ 31ನೇ ವಾರ್ಡ್‌ನ ಮಾರಮ್ಮನ ದೇವಾಲಯದ ಬಳಿ ವಾಟರ್ ಟ್ಯಾಂಕ್, ರಾಯರದೊಡ್ಡಿ ಬಸ್ ನಿಲ್ದಾಣ ಸೇರಿದಂತೆ ಕೆಲ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರೆವೇರಿಸಿದರು.