ಕಾಪು : ಕರಾವಳಿ ಪ್ರದೇಶವನ್ನು ಪ್ರವಾಸೋದ್ಯಮಕ್ಕೆ ಸಂಬಂಧಪಟ್ಟು ಸಮರ್ಪಕವಾಗಿ ಬಳಸಿಕೊಳ್ಳುವುದು ಅತ್ಯಗತ್ಯವಾಗಿದೆ. ಗೋವಾ ಮತ್ತು ಕೇರಳ ರಾಜ್ಯಗಳ ಮಾದರಿಯಲ್ಲಿಯೇ ರಾಜ್ಯದ ಕರಾವಳಿ ಪ್ರದೇಶವವನ್ನೂ ಪ್ರವಾಸೋದ್ಯಮಕ್ಕೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.
ಉಳಿಯರಗೋಳಿ ಯಾರ್ಡ್ ಫ್ರೆಂಡ್ಸ್ ವತಿಯಿಂದ ಜರಗಿದ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿದರು.ಉಳಿಯಾರಗೋಳಿ ಯಾರ್ಡ್ ಫ್ರೆಂಡ್ಸ್‌ನ ಅಧ್ಯಕ್ಷ ವಿನಯ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಸುರೇಶ್ ಪಿ. ಶೆಟ್ಟಿ ಗುರ್ಮೆ, ಯುವ ಸಬಲೀಕರಣ ಮತ್ತು ಕೀÅಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು.
ಯಾರ್ಡ್ ಫ್ರೆಂಡ್ಸ್‌ನ ಪದಾಧಿಕಾರಿಗಳಾದ ಗೌರವಾಧ್ಯಕ್ಷ ಅರುಣ್ ಶೆಟ್ಟಿ, ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.ದಿ| ರೇಣುಕಾ ನಾರ್ಣಪ್ಪ ಬಂಗೇರ ಇವರ ಸ್ಮರಣಾರ್ಥ ಸ್ಥಳೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಎಸ್ಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಪ್ರಜ್ಞಾ ಪುತ್ರನ್ ಅವರನ್ನು ಸಮ್ಮಾನಿಸಿ, ಗೌರವಿಸಲಾಯಿತು.
ಉಳಿಯಾರಗೋಳಿ ಯಾರ್ಡ್ ಫ್ರೆಂಡ್ಸ್‌ನ ಸದಸ್ಯ ವಿನೋದ್ ಕಾಂಚನ್ ಸ್ವಾಗತಿಸಿದರು. ಕೋಶಾಧಿಕಾರಿ ರಘುಪತಿ ರಾವ್ ವಂದಿಸಿದರು. ದಂಡತೀರ್ಥ ಪ. ಪೂ. ಕಾಲೇಜಿನ ಉಪನ್ಯಾಸಕ ಶಿವಣ್ಣ ಬಾಯಾರ್ ನಿರೂಪಿಸಿದರು.