Advertisement
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಳಿಗಿರಿರಂಗನ ಬೆಟ್ಟದ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದಲ್ಲಿ ಏರ್ಪಡಿಸಿದ್ದ, ʼಮೈತ್ರಿ ಮುಟ್ಟಿನ ಕಪ್- ಶುಚಿ ಯೋಜನೆಯʼ ರಾಜ್ಯ ಮಟ್ಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Related Articles
Advertisement
ತಾಯಿಯ ಹೃದಯವನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ರಾಜ್ಯ ಸರ್ಕಾರ, ತಾಯಿಯಂತೆ ಹೆಣ್ಣುಮಕ್ಕಳ ಬಗ್ಗೆ ವಿಚಾರ ಮಾಡಿ ಈ ಯೋಜನೆಯನ್ನು ಜಾರಿ ಮಾಡಿದೆ. ಬುಡಕಟ್ಟು ಜನಾಂಗವಿರುವ ಪ್ರದೇಶವನ್ನೇ ಆಯ್ಕೆ ಮಾಡಿಕೊಂಡು ಇಲ್ಲಿಯೇ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಆರಂಭದಲ್ಲಿ ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಯಾಗುತ್ತಿದೆ. ಗಡಿಭಾಗದಲ್ಲಿರುವ ಒಂದು ಜಿಲ್ಲೆ ಹಾಗೂ ಹೆಚ್ಚು ಶಿಕ್ಷಿತರಿರುವ ಒಂದು ಜಿಲ್ಲೆಯನ್ನು ಈ ಯೋಜನೆಗೆ ಆರಿಸಲಾಗಿದೆ. ನಮ್ಮ ರಾಜ್ಯ ಆರೋಗ್ಯವಂತ ರಾಜ್ಯವಾದಾಗ ಮಾತ್ರ ಅಭಿವೃದ್ಧಿಯಾಗಲು ಸಾಧ್ಯ. ರಾಜ್ಯ ಸರ್ಕಾರ ಪ್ರತಿಯೊಬ್ಬರ ಆರೋಗ್ಯ ಕಾಪಾಡುವ ಕೆಲಸವನ್ನು ಬದ್ಧತೆಯಿಂದ ಮಾಡಲಿದೆ ಎಂದು ತಿಳಿಸಿದರು.
ಪೊರಕೆ ಹಿಡಿದು ಗುಡಿಸಿದರೆ ದೇಶ ಸ್ವಚ್ಛವಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛತಾ ಅಭಿಯಾನದ ಬಗ್ಗೆ ಅನೇಕರು ತಮಾಷೆ ಮಾಡಿದ್ದರು. ಆದರೆ ಕಳೆದ ಎಂಟು ವರ್ಷಗಳಲ್ಲಿ 10 ಕೋಟಿ ಶೌಚಾಲಯ ನಿರ್ಮಾಣವಾಗಿದೆ. ಇದರಿಂದಾಗಿ ಮಹಿಳೆಯರು ಸ್ವಾಭಿಮಾನದಿಂದ ಬದುಕುವಂತಾಗಿದೆ ಎಂದರು.
ನರ್ಸ್ ನೇಮಕಾತಿಆದಿವಾಸಿ ಸೋಲಿಗ ಸಮುದಾಯದವರಲ್ಲಿ ನರ್ಸಿಂಗ್ ವ್ಯಾಸಂಗ ಮಾಡಿದವರಿಗೆ, ವಿಶೇಷ ನೇಮಕಾತಿ ಅಥವಾ ಮೀಸಲಾತಿ ಮೂಲಕ ನರ್ಸ್‌ಗಳನ್ನಾಗಿ ನೇಮಿಸಲು ಕ್ರಮ ವಹಿಸಲಾಗುವುದು. ಹಾಗೆಯೇ ಆಶಾ ಕಾರ್ಯರ್ತೆಯರನ್ನು ನೇಮಕ ಮಾಡುವಾಗಲೂ ಈ ಸಮುದಾಯವನ್ನು ವಿಶೇಷವಾಗಿ ಪರಿಗಣಿಸಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಹೊಸ ಆಸ್ಪತ್ರೆ
ಯಳಂದೂರು ತಾಲೂಕಿಗೆ ಹೊಸ ಆಸ್ಪತ್ರೆಯನ್ನು ಮಂಜೂರು ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ಜಿಲ್ಲೆಯ ಎರಡು ಕ್ಷೇತ್ರಗಳ ಆಸ್ಪತ್ರೆಗಳಿಗೆ ಡಯಾಲಿಲಿಸ್ ಯಂತ್ರಗಳನ್ನು ಕೂಡ ನೀಡಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.