Advertisement

Mudigere ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಚಿಂತನೆ: ಹೆಚ್.ಎಂ.ಶಾಂತಕುಮಾರ್

01:45 PM May 19, 2023 | Team Udayavani |

ಕೊಟ್ಟಿಗೆಹಾರ:ಈ ಬಾರಿ ಮೂಡಿಗೆರೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಚಿಂತನೆ ಇದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಹೆಚ್.ಎಂ.ಶಾಂತಕುಮಾರ್ ಹೇಳಿದರು.

Advertisement

ಮೂಡಿಗೆರೆ ತಾಲ್ಲೂಕು ಕಸಾಪ ವತಿಯಿಂದ ಜೇಸಿ ಭವನದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 109ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾಡು ನುಡಿ ಸಂಸ್ಕೃತಿಯ ಉಳಿವಿಗೆ ಸಾಹಿತ್ಯ ಪರಿಷತ್ತು ಕಂಕಣಬದ್ದವಾಗಿದ್ದು ಆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಾ ಬಂದಿದೆ. ಮೂಡಿಗೆರೆ ತಾಲ್ಲೂಕಿನ ಯುವಬರಹಗಾರರನ್ನು, ಯುವಕವಿಗಳನ್ನು ಪ್ರೋತ್ಸಾಹಿಸಲು ಮುಂದಿನ ದಿನಗಳಲ್ಲಿ ವಿನೂತನ ಕಾರ್ಯಕ್ರಮಗಳನ್ನು ರೂಪಿಸಲು ತೀರ್ಮಾನಿಸಲಾಗಿದೆ ಎಂದರು.

ಕನ್ನಡ ಅಸ್ಮಿತೆ ಕನ್ನಡ ಸಾಹಿತ್ಯ ಪರಿಷತ್ತು ಎಂಬ ವಿಷಯದ ಬಗ್ಗೆ ಲೇಖಕರಾದ ನಂದೀಶ್ ಬಂಕೇನಹಳ್ಳಿ ಉಪನ್ಯಾಸ ನೀಡಿ ಮಾತನಾಡಿ ಜಗತ್ತಿನ ಯಾವುದೇ ಮೂಲೆಯಲ್ಲಿರುವ ಸಾಂಸ್ಕೃತಿಕ ರಂಗ ಮನುಷ್ಯರನ್ನು ಜಾತಿ, ಮತದ ಆಧಾರದಲ್ಲಿ ವಿಭಜಿಸುವ ಸಿದ್ದಾಂತವನ್ನು ಒಪ್ಪುವುದಿಲ್ಲ. ಕನ್ನಡ ಸಾಹಿತ್ಯ ಪರಿಷತ್ತು ಎಲ್ಲರನ್ನೂ ಒಂದಾಗಿಸುತ್ತಾ ೧೦೯ ವರ್ಷಗಳನ್ನು ಪೂರೈಸಿದೆ. ಕನ್ನಡ ಭಾಷೆಗೆ ಎಲ್ಲಾ ಭೇದಗಳನ್ನು ಇಲ್ಲವಾಗಿಸುವ ಶಕ್ತಿ ಇದೆ. ಕಸಾಪ ತನ್ನ ಮೂಲ ಆಶಯಗಳಿಗೆ ದಕ್ಕೆಯಾಗದಂತೆ ಕಾರ್ಯ ನಿರ್ವಹಿಸುವ ಅಗತ್ಯ ಪ್ರಸ್ತುತ ಸಂದರ್ಭದಲ್ಲಿ ಅತ್ಯಂತ ಅಗತ್ಯವಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೂಡಿಗೆರೆ ಜೇಸಿಐ ಅಧ್ಯಕ್ಷೆ ಸವಿತಾರವಿ ಮಾತನಾಡಿ, ಶತಮಾನದ ಇತಿಹಾಸವಿರುವ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆಯ ಉಳಿವಿಗೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಕನ್ನಡ ನಾಡು ನುಡಿಯ ರಕ್ಷಣೆಗೆ ಕನ್ನಡಿಗರೆಲ್ಲರೂ ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ಕಾರ್ಯ ಪ್ರವೃತರಾಗಬೇಕಿದೆ ಎಂದರು.

Advertisement

ಈ ಸಂದರ್ಭದಲ್ಲಿ ಕಸಾಪ ಜಿಲ್ಲಾ ಪ್ರಧಾನ ಸಂಚಾಲಕ ಮಗ್ಗಲಮಕ್ಕಿ ಗಣೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಕ್ಕಿ ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಜಗದೀಪ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಎಂ.ಎಸ್,ನಾಗರಾಜ್, ಬಾಳೂರು ಹೋಬಳಿ ಘಟಕದ ಅಧ್ಯಕ್ಷ ರವಿ ಪಟೇಲ್, ಕಸಾಪ ಪದಾಧಿಕಾರಿಗಳಾದ ಡಿ.ಕೆ ಲಕ್ಷಣಗೌಡ, ಹಸೈನಾರ್ ಬಿಳಗುಳ, ಪ್ರಕಾಶ್, ನಾರಾಯಣ, ಅಂಬಾವತಿ ಶೆಟ್ಟಿ, ಭಾನುಮತಿ, ಚಂದ್ರಶೇಖರ, ತಿಮ್ಮೆಗೌಡ, ಹಾ.ಬಾ ನಾಗೇಶ್. ಸುಧಾ ಚಂದ್ರಶೇಖರ್ ಮುಂತಾದವರು ಭಾಗವಹಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next