Advertisement

Mangaluru; ಸರ್ಕಾರದಿಂದಲೇ ಡಯಾಲಿಸಿಸ್ ವ್ಯವಸ್ಥೆ ನಿರ್ವಹಣೆಗೆ ಚಿಂತನೆ: ದಿನೇಶ್ ಗುಂಡೂರಾವ್

03:08 PM Dec 02, 2023 | Team Udayavani |

ಮಂಗಳೂರು: ಏಜೆನ್ಸಿ ಮೂಲಕ ಡಯಾಲಿಸಿಸ್ ವ್ಯವಸ್ಥೆ ಜಾರಿ ಮಾಡಲು ಸಾಧ್ಯವಾಗದೆ ಇದ್ದರೆ ಸರ್ಕಾರದಿಂದಲೇ ನಿರ್ವಹಣೆ ಮಾಡುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಡಯಾಲಿಸಿಸ್ ವ್ಯವಸ್ಥೆಯು ನಾನು ಆರೋಗ್ಯ ಸಚಿವನಾಗುವ ಮೊದಲೇ ಗೊಂದಲದಲ್ಲಿದೆ. ಹಿಂದಿನ ಸರ್ಕಾರ ಎರಡು ಏಜೆನ್ಸಿಗೆ ಕೊಟ್ಟಿತ್ತು, ಅದರಲ್ಲಿ ಒಬ್ಬರು ಅರ್ಧದಲ್ಲೇ ಬಿಟ್ಟಿದ್ದರು. ಏಜೆನ್ಸಿ ನಿರ್ವಹಣೆ ಸರಿಯಲಿಲ್ಲ, ಸಿಬ್ಬಂದಿಗೆ ಸಂಬಳ ಸರಿಯಾಗಿ ಕೊಡುತ್ತಿರಲಿಲ್ಲ. ಅವರ ಇಎಸ್ ಐ, ಪಿಎಫ್ ಕಟ್ಟಿರಲಿಲ್ಲ, ರಾಜ್ಯ ಸರ್ಕಾರ ಕಟ್ಟಲು ನೋಡುತ್ತಿದೆ ಆದರೆ ಅದಕ್ಕೆ ಮೊದಲು ಆ ಏಜೆನ್ಸಿ ಬ್ಲಾಕ್ ಲಿಸ್ಟ್ ಮಾಡುವ ಕೆಲಸವಾಗುತ್ತಿದೆ ಎಂದರು,

ನಾಲ್ಕು ವಿಭಾಗದಲ್ಲಿ ಹೊಸ ಏಜೆನ್ಸಿಗಳಿಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಡಯಾಲಿಸ್ ಮೆಷಿನ್ ಕೆಟ್ಟು ಹೋದ ಕಡೆ ಅದನ್ನು ಬದಲಾಯಿಸಲಾಗುತ್ತಿಲ್ಲ. ಈಗಿರುವ ಏಜೆನ್ಸಿ ಮಾಡಬೇಕು, ಅಥವಾ ಹೊಸ ಏಜೆನ್ಸಿ ಬಂದ ಬಳಿಕ ಮಾಡಬೇಕು, ಯಾವುದೂ ಆಗದೇ ಇದ್ದಲ್ಲಿ ಸರ್ಕಾರವೇ ನಿರ್ವಹಣೆ ಮಾಡುವ ಬಗ್ಗೆ ಚಿಂತನೆಯಿದೆ ಎಂದರು.

ಸರ್ಕಾರವೇ ಮೆಷಿನ್ ಖರೀದಿಸಿ ನಿರ್ವಹಣೆ ಮಾಡಲು ಚಿಂತಿಸಿದೆ. ಟೆಂಡರ್ ಪ್ರಕ್ರಿಯೆ ಮುಗಿಯಲಿ, ಆ ಬಳಿಕ ನಿರ್ಧಾರ ಮಾಡೋಣ. ಡಯಾಲಿಸಸ್ ಸಿಬ್ಬಂದಿಯ ಬಗ್ಗೆ ನಮಗೆ ಕಾಳಜಿ ಇದೆ. ಅವರಿಗೆ ಯಾವುದೇ ಸಮಸ್ಯೆ‌ ಆಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next