Advertisement

ಕೂಲಿ ಕಾರ್ಮಿಕರ ಅನುಕೂಲಕ್ಕೆ ಗಂಜಿ ಕೇಂದ್ರ ಆರಂಭಕ್ಕೆ ಚಿಂತನೆ

11:28 AM Mar 31, 2020 | Suhan S |

ಜಗಳೂರು: ಯುದ್ಧದ ಸಂದರ್ಭದಲ್ಲಿ ಸೈನಿಕರು ಯಾವ ರೀತಿ ಕೆಲಸ ಮಾಡುತ್ತಾರೋ ಅವರಂತೆ ನಾವು ಕೂಡ ಕೊರೊನಾ ವಿರುದ್ಧ ಹೊರಾಟ ಮಾಡಬೇಕಾಗಿದೆ ಎಂದು ತಹಶೀಲ್ದಾರ್‌ ಹುಲ್ಲುಮನಿ ತಿಮ್ಮಣ್ಣ ಹೇಳಿದರು.

Advertisement

ಪಟ್ಟಣದ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಪಿಡಿಒಗಳು ಮತ್ತು ಗ್ರಾಮಲೆಕ್ಕಾಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಟಾಸ್ಕ್ಪೋರ್ಸ್‌ ರಚಿಸಲಾಗಿದೆ. ಈ ಸಮಿತಿಯವರು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಸಂತೆ, ಜಾತ್ರೆ, ಹಬ್ಬಗಳನ್ನು ಆಚರಿಸುವುದನ್ನು ತಡೆಗಟ್ಟಬೇಕು ಹಾಗೂ ಗ್ರಾಮದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.ಗ್ರಾಮಗಳಲ್ಲಿ ಊಟದ ಸಮಸ್ಯೆ ಎದುರಿಸುತ್ತಿರುವ ಕೂಲಿ ಕಾರ್ಮಿಕರ ಪಟ್ಟಿ ನೀಡಿದರೆ ಪಟ್ಟಣದಲ್ಲಿ ಗಂಜಿ ಕೇಂದ್ರ ಆರಂಭಿಸಲಾಗುವುದು ಎಂದರು.

ತಾಪಂ ಇಒ ಮಲ್ಲಾ ನಾಯ್ಕ ಮಾತನಾಡಿ, ಪಿಡಿಒಗಳು ಪಂಚಾಯತ್‌ ಕೇಂದ್ರ ಸ್ಥಾನದಲ್ಲಿರಬೇಕು ಮತ್ತು ಪಂಚಾಯತ್‌ ವ್ಯಾಪ್ತಿಯ ಗ್ರಾಮಗಳಲ್ಲಿ ಧ್ವನಿವರ್ಧಕಗಳ ಮೂಲಕ ಕೋವಿಡ್ 19 ಬಗ್ಗೆ ಜಾಗೃತಿ ಮೂಡಿಸಬೇಕು. ಕೆಲವು ಗ್ರಾಮಗಳ ರೇಷನ್‌ ಅಂಗಡಿಗಳಲ್ಲಿ ಕೃತಕ ಆಭಾವ ಸೃಷ್ಟಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳಿದ್ದು, ಅವುಗಳ ಬಗ್ಗೆ ಗಮನ ನೀಡುವಂತೆ ಸೂಚಿಸಿದರು. ಸಭೆಯಲ್ಲಿ ಉಪತಹಶಿಲ್ದಾರ್‌ ರಾಮಚಂದ್ರ, ರೇವಣ್ಣ, ಸಿದ್ದಿಕ್‌, ಪಿಡಿಒಗಳು, ಗ್ರಾಮಲೆಕ್ಕಾಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next