Advertisement

ಕೂಡಲಸಂಗಮ ಕಾಗಿನೆಲೆಯಲ್ಲಿ ಒಬಿಸಿ ಸಮಾವೇಶಕ್ಕೆ ಚಿಂತನೆ

06:50 AM Mar 01, 2018 | Team Udayavani |

ಬೆಂಗಳೂರು: ಹಿಂದುಳಿದ ವರ್ಗಗಳ ಮತದಾರರನ್ನು ಪಕ್ಷಕ್ಕೆ ಸೆಳೆದುಕೊಳ್ಳುವ ಉದ್ದೇಶದಿಂದ ರಾಜ್ಯದಲ್ಲಿ ಹಿಂದುಳಿದ
ವರ್ಗಗಳ ಎರಡು ಬೃಹತ್‌ ಸಮಾವೇಶಗಳನ್ನು ನಡೆಸಲು ಬಿಜೆಪಿ ತೀರ್ಮಾನಿಸಿದೆ.

Advertisement

ಬಸವಣ್ಣನ ಐಕ್ಯಸ್ಥಳ ಕೂಡಲಸಂಗಮ ಮತ್ತು ಕನಕ ಗುರುಪೀಠ ಇರುವ ಕಾಗಿನೆಲೆಯಲ್ಲಿ ಈ ಸಮಾವೇಶಗಳನ್ನು ನಡೆಸಲು ಚಿಂತಿಸಲಾಗಿದೆ. ಗುರುವಾರ ರಾಯಚೂರಿನಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಪ್ರಭಾರಿ ಹಾಗೂ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಸಭೆಯಲ್ಲಿ ಸ್ಥಳ ಅಂತಿಮಗೊಳಿಸುವುದರ ಜತೆಗೆ ದಿನಾಂಕವನ್ನೂ ನಿಗದಿಪಡಿಸಲಾಗುವುದು ಎಂದು ಸಮಾವೇಶದ ಜವಾಬ್ದಾರಿ ವಹಿಸಿರುವ ಕೆ.ಎಸ್‌.ಈಶ್ವರಪ್ಪ ಉದಯವಾಣಿಗೆ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ನಡೆಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಆದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ಕಾರಣದಿಂದಾಗಿ ಇದುವರೆಗೆ ಸಮಾವೇಶ ಆರಂಭಿಸಲು ಸಾಧ್ಯವಾಗಿರಲಿಲ್ಲ.
 

Advertisement

Udayavani is now on Telegram. Click here to join our channel and stay updated with the latest news.

Next