Advertisement

ಸರಕಾರದ ವಿರುದ್ಧ ಹೋರಾಟಕ್ಕೆ ಚಿಂತನೆ: ನರಿಬೋಳ

12:58 PM Sep 08, 2017 | |

ಕಲಬುರಗಿ: ಜಿಲ್ಲೆಯಲ್ಲಿ ವಸತಿ ನಿಲಯಗಳು, ಅಶ್ರಯ ಯೋಜನೆ, ಇಂದಿರಾ ಆವಾಸ್‌, ಬಸವ ಯೋಜನೆಗಳಲ್ಲಿ
ಕಂಡು ಬಂದಿರುವ ನೂನ್ಯತೆಗಳನ್ನು ಪಟ್ಟಿ ಮಾಡಿ ಹೋರಾಟ ರೂಪಿಸಲು ಚಿಂತನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು.

Advertisement

ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ
ಕಾರ್ಯಕಾರಣಿ ಸಭೆ ಮತ್ತು ಬ್ರಹ್ಮಶ್ರೀ ನಾರಾಯಣ ಗುರೂಜಿ 163ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬೂತ್‌ ಮಟ್ಟದ ಸಮಿತಿಗಳನ್ನು ರಚಿಸುವ ಮೂಲಕ ಪಕ್ಷವನ್ನು ತಳಮಟ್ಟದಲ್ಲಿ ಇನ್ನಷ್ಟು ಸಂಘಟಿಸುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷ ರಾಜಗೋಪಾಲರೆಡ್ಡಿ ಮುದಿರಾಜ್‌ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಪಕ್ಷದ ವೇದಿಕೆಯಲ್ಲಿ ವರ್ಷವಾರು ಸಮಾಜದ ನಾಯಕರ ಜಯಂತಿಗಳನ್ನು ಆಚರಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಮುಂದಿನ 15 ದಿನಗಳಲ್ಲಿ ಬೂತ್‌ ಮತ್ತು ಮಂಡಲ ಮಟ್ಟದ ಸಮಿತಿಗಳನ್ನು ರಚನೆ ಮಾಡಲಾಗುವುದು. ಅಲ್ಲದೆ, ರಾಜ್ಯ ಸರಕಾರ ವಿರುದ್ಧ ವಿವಿಧ ಮಟ್ಟದಲ್ಲಿ ಹೋರಾಟಗಳನ್ನು ರೂಪಿಸಲು ಯೋಜಿಸಲಾಗಿದೆ ಎಂದರು.

Advertisement

ಮಾಜಿ ಶಾಸಕ ಎಂ.ವೈ. ಪಾಟೀಲ, ವಾಲ್ಮೀಕಿ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಕುಮಾರ ನೀಲಂಗಿ,
ಪ್ರಕಾಶ ಜಮಾದಾರ, ಸಿದ್ರಮಪ್ಪಾ ಬಿರಾದಾರ, ಲಿಂಗರಾಜ ಬಿರಾದಾರ, ಮೋರ್ಚಾದ ಜಿಲ್ಲಾಧ್ಯಕ್ಷ ಶ್ರೀಶೈಲ ನಾಟೀಕಾರ, ಪ್ರಧಾನ ಕಾರ್ಯದರ್ಶಿ ದಯಾಸಾಗರ ಪುಲಾರೆ, ಚಂದ್ರಶೇಖರ ಹಿರೇಮಠ, ಸಂತೋಷ ತಳವಾರ, ಭೀಮಣ್ಣ ಹೆಡಗಿಜೋಳ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next