Advertisement

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ತೃತೀಯ ಲಿಂಗಿ ಜಯಭೇರಿ

03:01 PM Dec 07, 2022 | Team Udayavani |

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಸುಲ್ತಾನ್‌ಪುರಿ-ಎ ವಾರ್ಡ್‌ನಿಂದ ಸ್ಪರ್ಧಿಸಿದ್ದ ಎಎಪಿ ಅಭ್ಯರ್ಥಿ ಏಕೈಕ ಟ್ರಾನ್ಸ್‌ಜೆಂಡರ್ ಬೋಬಿ ಗೆಲುವು ಸಾಧಿಸಿದ್ದಾರೆ.

Advertisement

ರಾಜ್ಯ ಚುನಾವಣಾ ಆಯೋಗ ಬೋಬಿ ಅವರು ಗೆಲುವು ಸಾಧಿಸಿರುವುದನ್ನು ಘೋಷಿಸಿದೆ. ಬೋಬಿ ಅವರು ಕಾಂಗ್ರೆಸ್ ಅಭ್ಯರ್ಥಿ ವರುಣಾ ಢಾಕಾ ಅವರನ್ನು 6,714 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಆಪ್ ಅಭ್ಯರ್ಥಿಯಾಗಿ ಆಯ್ಕೆಯಾದ ನಂತರ, ತನ್ನ ಕ್ಷೇತ್ರವನ್ನು ಸುಂದರಗೊಳಿಸಲು ಮತ್ತು ತನ್ನ ನೆರೆಹೊರೆಯವರ ಜೀವನವನ್ನು ಸುಧಾರಿಸಲು ಬಯಸುವುದಾಗಿ ಬೋಬಿ ಹೇಳಿದ್ದರು. ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ನಿಂದ ಭ್ರಷ್ಟಾಚಾರವನ್ನು ತೊಡೆದುಹಾಕಲು ತಾನು ಕೆಲಸ ಮಾಡುತ್ತೇನೆ ಎಂದು ಬೋಬಿ ಹೇಳಿದ್ದಾರೆ.

250 ವಾರ್ಡ್ ಸದಸ್ಯ ಬಲದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 133 ವಾರ್ಡ್ ಗಳಲ್ಲಿ ಅಮೋಘ ಗೆಲುವು ಸಾಧಿಸುವ ಮೂಲಕ ಬಿಜೆಪಿಯಿಂದ ಅಧಿಕಾರ ಕಸಿದಿದೆ. ಬಿಜೆಪಿ 105 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಕೇವಲ 8 ವಾರ್ಡ್ ಗಳಲ್ಲಿ ಜಯಗಳಿಸಿ ಮೂರನೇ ಸ್ಥಾನ ಪಡೆದುಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next