Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕೆ ತೆಗೆದುಕೊಳ್ಳಿ, ಮಾರ್ಗಸೂಚಿ ಪಾಲನೆ ಮಾಡಬೇಕು. ಬಹಿರಂಗ ಸಮಾವೇಶ, ಗುಂಪುಗೂಡುವುದು ಮಾಡಬೇಡಿ. ಒಂದೂವರೆ ತಿಂಗಳು ಎಚ್ಚರಿಕೆಯಿಂದ ಇರಬೇಕು ಎಂದರು.
Related Articles
Advertisement
ವೀಕೆಂಡ್ ಕರ್ಫ್ಯೂ ಮಾಡಿದರೂ ಸೋಂಕು ಕಡಿಮೆ ಆಗುತ್ತಿಲ್ಲವೆಂಬ ವಿಚಾರಕ್ಕೆ ಪ್ರತಿಕ್ರಯಿಸಿದ ಅವರು, ಕಳೆದ ವಾರದಿಂದ ವೀಕೆಂಡ್ ಲಾಕ್ ಮಾಡಿದ್ದೇವೆ. ಏಳು ದಿನಕ್ಕೆ ಸೋಂಕು ಕಡಿಮೆ ಆಗುವುದಿಲ್ಲ. ಮೊದಲ ಎರಡು ಅಲೆಯಲ್ಲಿ 14 ದಿನಗಳ ಚೈನ್ ಇತ್ತು. ಆದರೆ ಈ ಅಲೆಯಲ್ಲಿ ಸ್ವಲ್ಪ ಕಡಿಮೆ ಇದೆ. ಈ ಸೋಂಕು 5-6 ಪಟ್ಟು ವೇಗವಾಗಿ ಹರಡುತ್ತಿದೆ. ಹೀಗಾಗಿ ಇನ್ನು ಸ್ವಲ್ಪ ದಿನದಲ್ಲಿ ವೀಕೆಂಡ್ ಕರ್ಫ್ಯೂ ಫಲಿತಾಂಶ ಸಿಗಬಹುದು ಎಂದರು.
ಲಾಕ್ ಡೌನ್ ಇಲ್ಲ: ಲಾಕ್ ಡೌನ್ ಮೂಲಕ ಸೋಂಕು ನಿಯಂತ್ರಣ ಆಗುವುದಿಲ್ಲ. ಎರಡು ಬಾರಿ ಲಾಕ್ ಡೌನ್ ಮಾಡಿ ಜನರಿಗೆ ಸಮಸ್ಯೆ ಆಗಿದೆ. ನಿನ್ನೆ ಪ್ರಧಾನಿ ಮೋದಿ ಕೂಡಾ ಆರ್ಥಿಕ ನಷ್ಟ ಆಗದಂತೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ. ಹೀಗಾಗಿ ಲಾಕ್ ಡೌನ್ ಅಂತಹ ನಿಯಮ ಇಲ್ಲದೆ ಅಗತ್ಯ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಸುಧಾಕರ್ ಹೇಳಿದರು.