ತೀರ್ಥಹಳ್ಳಿ: ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸವನ್ನು ಇಂದಿನ ಮಕ್ಕಳಿಗೆ ಹಾಗೂ ಯುವಕರಿಗೆ ಮನನ ಮಾಡುವ ಕೆಲಸವನ್ನು ಶಿಕ್ಷಕರು ಮಾಡಬೇಕಾಗಿದೆ. ಪ್ರಸ್ತುತ ಭಾರತೀಯರಾದ ನಾವಿಂದು ರಾಷ್ಟ್ರೀಯತೆ, ಚಾರಿತ್ರ್ಯ ಬೆಳೆಸುವುದರ ಬಗ್ಗೆ ಚಿಂತಿಸುವ ಅಗತ್ಯವಿದೆ ಎಂದು ಶಿಕ್ಷಣ ತಜ್ಞ ಕೆ.ಎಂ. ಜಯಶೀಲ ಹೇಳಿದರು.
ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ತಾಲೂಕು ಆಡಳಿತದ 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಅವರು ಮುಖ್ಯ ಭಾಷಣ ಮಾಡಿದರು.
ಸ್ವಾತಂತ್ರ್ಯ ಸಂಗ್ರಾಮದ ಹೋರಾಟಕ್ಕೆ ರೋಚಕ ಇತಿಹಾಸವಿದೆ. ಆ ಇತಿಹಾಸವನ್ನು ಸ್ಮರಿಸಿಕೊಳ್ಳುವ ಮೂಲಕ ಮಕ್ಕಳಲ್ಲಿ ದೇಶಭಕ್ತಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ. ಮಹಾತ್ಮ ಗಾಂಧಿಧೀಜಿಯವರ 150ನೇ ಜನ್ಮ ದಿನೋತ್ಸವ ಹಾಗೂ 73ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿರುವುದು ಈ ವರ್ಷದ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ದೇಶಭಕ್ತಿ ಭಾವನೆಗಳನ್ನು ನಾವಿಂದು ಮೈಗೂಡಿಸಿಕೊಳ್ಳಬೇಕು. ರಾಷ್ಟ್ರ ಕಟ್ಟುವಲ್ಲಿ ಪ್ರತಿಯೊಬ್ಬ ಪ್ರಜೆ ಕೈ ಜೋಡಿಸಬೇಕಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯಲು ಕೆಲವು ನಾಯಕರು ಕುಮ್ಮಕ್ಕು ನೀಡಿದರೂ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಆದರೆ ಇಂದು ದೇಶ ಪರಿವರ್ತನೆಯ ಹಾದಿಯಲ್ಲಿದೆ. ನಾವು ಸ್ವಾಭಿಮಾನಿಗಳಾಗಿ ಬದುಕಲು ಸರ್ಕಾರಗಳ ಯೋಜನೆಗಳು ಹೊಸ ರೂಪ ನೀಡಿವೆ. ವರ್ಗಗಳ ತುಷ್ಟೀಕರಣ ಹಾಗೂ ಓಟ್ ಬ್ಯಾಂಕ್ ರಾಜಕಾರಣದಿಂದ ದೇಶದಲ್ಲಿ ಕೆಲವು ರಾಜಕೀಯ ಪಕ್ಷಗಳು ದೇಶವನ್ನು ತಪ್ಪು ದಾರಿಗೆಳೆಯಲು ಯತ್ನಿಸಿದ್ದು ವಿಷಾದನೀಯ ಎಂದರು.
ಇದಕ್ಕೂ ಮುನ್ನ ಪಪಂ ಆವರಣದಲ್ಲಿ ತಹಶೀಲ್ದಾರ್ ಎಂ. ಭಾಗ್ಯ ಧ್ವಜಾಹೋರಣ ನೆರವೇರಿಸಿದರು. ತಾಪಂ ಅಧ್ಯಕ್ಷೆ ನವಮಣಿ, ಉಪಾಧ್ಯಕ್ಷೆ ಯಶೋಧ ಮಂಜುನಾಥ್, ಜಿಪಂ ಸದಸ್ಯೆ ಭಾರತಿ ಪ್ರಭಾಕರ್, ಶ್ರೀನಿವಾಸ್, ಪಪಂ ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಆನಂದಕುಮಾರ್ ಮತ್ತಿತರರು ಇದ್ದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು.