Advertisement

ಆರು ತಿಂಗಳೊಳಗೆ ಈ ಸರ್ಕಾರ ಪತನ

12:58 PM May 24, 2018 | |

ಚಿಂತಾಮಣಿ: ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರ ರಚನೆ ಖಂಡಿಸಿ ನಗರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ಕಪ್ಪುಪಟ್ಟಿ ಕಟ್ಟಿಕೊಂಡು ಕರಾಳ ದಿನ ಆಚರಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಕಪ್ಪು ಪಟ್ಟಿ ಧರಿಸಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದರು.

Advertisement

ಜನತೆಗೆ ದ್ರೋಹ:ಈ ವೇಳೆ ಮಾತನಾಡಿದ ಬಿಜೆಪಿ ತಾಲೂಕು ಅಧ್ಯಕ್ಷ ಆಂಜನೇಯರೆಡ್ಡಿ, ರಾಜ್ಯದಲ್ಲಿ 104 ಶಾಸಕರನ್ನು ಹೊಂದಿರುವ ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬುದು ರಾಜ್ಯದ ಜನತೆಯ ಆಶಯವಾಗಿತ್ತು. ಆದರೆ, ಚುನಾವಣೆಯಲ್ಲಿ ಜನರಿಂದ ತಿರಸ್ಕೃತಗೊಂಡಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಪವಿತ್ರ ಮೈತ್ರಿ ಮಾಡಿಕೊಂಡು ರಾಜ್ಯದ ಜನತೆಗೆ ದ್ರೋಹ ಬಗೆದಿವೆ. ಈ ಸಮ್ಮಿಶ್ರ ಸರ್ಕಾರ ಬಹುಕಾಲ ಉಳಿಯುವುದಿಲ್ಲ. ಮೂರರಿಂದ ಆರು ತಿಂಗಳಲ್ಲಿ ಸರ್ಕಾರ ಪತನವಾಗಿ, ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣಾ ಪೂರ್ವದಲ್ಲಿ ಸರ್ಕಾರ ರಚನೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದ ಕಾಂಗ್ರೆಸ್‌ ನಾಯಕರು, ಇದೀಗ ಜೆಡಿಎಸ್‌ ಜೊತೆ ಕೈಜೋಡಿಸಿ ಮಾತು ತಪ್ಪಿದ್ದಾರೆ ಎಂದು ಕಿಡಿಕಾರಿದರು.

ಮುಖಂಡ ನಾ. ಶಂಕರ್‌ ಮಾತನಾಡಿ, ಈ ಮೈತ್ರಿ ಸರ್ಕಾರ ಹೆಚ್ಚು ಆಯಸ್ಸು ಇಲ್ಲ. ಮುಂದಿನ ಲೋಕಸಭಾ  ಚುನಾವಣೆಯಲ್ಲಿ ಬಿಜೆಪಿ ಕೇಂದ್ರದಲ್ಲಿ ಗದ್ದುಗೆ ಅತಿ ಹೆಚ್ಚು ಸಂಸದರನ್ನು ಗೆಲ್ಲಿಸಲಾಗುವುದು. ಕರ್ನಾಟಕದಲ್ಲೂ ಮತ್ತೆ ಕಮಲ ಅರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾದ ಮಾಡಿಕೇರಿ ಅರುಣ ಬಾಬು, ಟಿ.ಸಿ.ವೆಂಕಟೇಶ್‌ ರೆಡ್ಡಿ, ಸದಾಶಿವರೆಡ್ಡಿ, ಸತ್ಯನಾರಾಯಣ, ಮಹೇಶ್‌, ಬತ್ಲಹಳ್ಳಿ ಶ್ರೀನಿವಾಸ್‌, ಶ್ರೀಧರ್‌ ಮೂರ್ತಿ, ಶಿವಣ್ಣ, ವೆಂಕಟರವಣ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next