Advertisement

Karnataka Politics; ಇದು ಸಾರಾಯಿ ಗ್ಯಾರಂಟಿ ಸರ್ಕಾರ: ಬಸವರಾಜ ಬೊಮ್ಮಾಯಿ

04:24 PM Sep 25, 2023 | Team Udayavani |

ಬೆಂಗಳೂರು: ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ. ಇದು ಸಾರಾಯಿ ಗ್ಯಾರಂಟಿ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

Advertisement

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರ್ಕಾರದ ನೈತಿಕ ದಿವಾಳಿತನವನ್ನು ತೋರಿಸುತ್ತದೆ. ಒಂದೆಡೆ ಗ್ಯಾರೆಂಟಿ ಹೆಸರಲ್ಲಿ ಮಹಿಳೆಯರಿಗೆ 2000 ರೂ. ನೀಡುವುದಾಗಿ ಹೇಳುವ ಸರ್ಕಾರ ಅದೇ ಹಣವನ್ನು ಅವರ ಗಂಡಂದಿರಿಂದ ವಸೂಲಿ ಮಾಡಲು ಮದ್ಯ ಮಾರಾಟದ ಮಾರ್ಗ ಹುಡುಕಿಕೊಂಡಂತಿದೆ. ಹೆಂಡತಿಯ ದುಡ್ಡು ಗಂಡಂದಿರಿಂದ ಪಡೆಯುವ ಮನಿ ರಿಟರ್ನ್ ಪಾಲಿಸಿ ಹಾಕಿಕೊಂಡ ಹಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಸರ್ಕಾರಿ ಮದ್ಯದಂಡಗಿ ತೆರೆಯುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿರುವುದು ಹಾಸ್ಯಾಸ್ಪದವಾಗಿದೆ. ಅಕ್ರಮ ತಡೆಯಲಾಗದಿದ್ದರೆ ನಿಮ್ಮ ಇಲಾಖೆ ಮಾಡುವುದಾದರೂ ಏನು ಎಂದು ಪ್ರಶ್ನಿಸಿದ್ದಾರೆ.

ಗ್ಯಾರಂಟಿ ಯೋಜನೆಯಲ್ಲಿ ಮನೆ ಯಜಮಾನಿ ಹುಡುಕುವ ಹೆಸರಲ್ಲಿ ಅತ್ತೆ ಸೊಸೆ ನಡುವೆ ಜಗಳ ಹಚ್ಚಿರುವ ಸರ್ಕಾರ ಇನ್ನು ಸಾರಾಯಿ ಕುಡಿಯಲು ಹಣಕ್ಕಾಗಿ ಗಂಡ ಹೆಂಡಿರ ನಡುವೆ ಜಗಳ ಹಚ್ಚಲು ಮುಂದಾಗಿದೆ. ಸರ್ಕಾರ ಆದಾಯ ಗಳಿಸಲು ಮದ್ಯ ಮಾರಾಟ ಮೊರೆ ಹೋದರೆ, ಸರ್ಕಾರದ ಗ್ಯಾರಂಟಿ ಪಡೆಯುವ ಮಹಿಳೆಯರೇ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next