Advertisement

ಇದೇ ನನ್ನ ಕೊನೇ ಚುನಾವಣೆ: ಸಿಎಂ

07:20 AM Dec 10, 2017 | Team Udayavani |

ಮೈಸೂರು: “ಇದು ನನ್ನ ಕೊನೆಯ ಚುನಾವಣೆ. 2006ರ ಉಪ ಚುನಾವಣೆಯಲ್ಲಿ ರಾಜಕೀಯವಾಗಿ ನನಗೆ ಮರುಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದ ಜನರ ಋಣ ತೀರಿಸಲು, ಮುಂಬರುವ ಚುನಾವಣೆಯಲ್ಲಿ ಈ ಕ್ಷೇತ್ರದಿಂದಲೇ ಸ್ಪರ್ಧಿಸಿ ಗೆದ್ದು ಬರುವುದಾಗಿ’ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1983ರಿಂದಲೂ ಚಾಮುಂಡೇಶ್ವರಿ ಕ್ಷೇತ್ರದ ಮೂಲ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ. ಈ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದು ಜನರ ಋಣ ತೀರಿಸುತ್ತೇನೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಕೆಲ ಶಾಸಕರು ಕಾಂಗ್ರೆಸ್‌ ಸೇರಲಿದ್ದಾರೆ: ಕಾಂಗ್ರೆಸ್‌ ಸೇರ್ಪಡೆ ಸಂಬಂಧ ಬಿಜೆಪಿಯ ಕೆಲ ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದು, ಹೆಚ್ಚಿನ ವಿವರಗಳನ್ನು ಈಗ ಬಹಿರಂಗಪಡಿಸಲಾಗುವುದಿಲ್ಲ. ಕಾಂಗ್ರೆಸ್‌ ಸೇರಲು ಬಯಸಿರುವ ಬಿಜೆಪಿ ಶಾಸಕರ ಕ್ಷೇತ್ರದ ಪರಿಸ್ಥಿತಿ ಹಾಗೂ ಕ್ಷೇತ್ರದಲ್ಲಿನ ಅಭಿವೃದ್ಧಿಯನ್ನು ಗಮನಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ಶಾಸಕ ಉಮೇಶ್‌ ಕತ್ತಿ ಹಾಗೂ ತಾವು ಮೊದಲಿನಿಂದಲೂ ಸ್ನೇಹಿತರು. ಆದರೆ, ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ವಿಷಯ ತಿಳಿದಿಲ್ಲ ಹಾಗೂ ಈ ಕುರಿತು ಅವರು ನನ್ನೊಂದಿಗೆ ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next