Advertisement

ಬಿಜೆಪಿ ತಾಕತ್ತು ತೋರಿಸುವ ಚುನಾವಣೆ ಇದು

12:32 AM Mar 08, 2023 | Shreeram Nayak |

ಬೆಂಗಳೂರು: ಬಿಟಿಎಂ ಕ್ಷೇತ್ರ ಸೇರಿ ರಾಜ್ಯದಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮತ್ತು ಬಿಜೆಪಿ ತಾಕತ್ತು ತೋರಿಸುವ ಚುನಾವಣೆ ಹತ್ತಿರದಲ್ಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.

Advertisement

ನಗರದ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ವಿಜಯ ಸಂಕಲ್ಪ ಯಾತ್ರೆಯು ಕೇವಲ ನಾಯಕರ ಯಾತ್ರೆಯಲ್ಲ. ನಾವೆಲ್ಲರೂ ಬಿಜೆಪಿ ಗೆಲುವಿಗೆ ಪರಿಶ್ರಮ ಪಟ್ಟು ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ಕಂದಾಯ ಸಚಿವ ಆರ್‌. ಅಶೋಕ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ, ವಿಭಾಗ ಪ್ರಭಾರಿ ಗೋಪಿನಾಥ್‌ ರೆಡ್ಡಿ, ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಎನ್‌. ಆರ್‌. ರಮೇಶ್‌, ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮುಖಂಡ ಸಚ್ಚಿದಾನಂದ ಮೂರ್ತಿ ಮತ್ತಿತರರು ಭಾಗವಹಿಸಿದ್ದರು.

ಮಂಗಳವಾರ ಬೆಳಗ್ಗೆ ಜಯನಗರದಲ್ಲಿ ನಿಗದಿಯಂತೆ ರಥಯಾತ್ರೆ ಆರಂಭ ಗೊಳ್ಳಬೇಕಿತ್ತು. ಆದರೆ ಜಯನಗರದಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಮನ್ಸುಖ್‌ ಮಾಂಡವೀಯ ಮುಂತಾದವರು ಜನೌಷಧ ದಿವಸ್‌ ಆಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಾರಣ ವಿಜಯ ಸಂಕಲ್ಪ ಯಾತ್ರೆಯನ್ನು ರದ್ದು ಪಡಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next