Advertisement

ಇದೇ ಮೊದಲ ಬಾರಿಗೆ ಕೆಎಸ್ ಆರ್ ಟಿಸಿ ಸಿಬಂದಿಗಳಿಗೆ 50 ಲಕ್ಷ ರೂ. ಅಪಘಾತ ವಿಮೆ

04:46 PM Oct 19, 2022 | Team Udayavani |

ಬೆಂಗಳೂರು: ಇದೇ ಮೊದಲ ಬಾರಿಗೆ ಕೆಎಸ್ ಆರ್ ಟಿಸಿ ಸಿಬಂದಿಗಳು ಹಾಗೂ ಅವರ ಅವಲಂಬಿತರಿಗಾಗಿ 50 ಲಕ್ಷ ರೂ. ಅಪಘಾತ ವಿಮೆ ಪ್ಯಾಕೇಜ್ ಯೋಜನೆಯ ಒಡಂಬಡಿಕೆಗೆ ಬುಧವಾರ ಸಹಿ ಹಾಕಲಾಗಿದೆ.

Advertisement

ಸಂಸ್ಥೆಗಾಗಿ ಹಗಲಿರುಳು ದುಡಿಯುವ ಸಿಬಂದಿಗಳ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆಯು ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದೆಂಬ ಕಾರಣದಿಂದ ಅವರ ಅವಲಂಬಿತರ ಹಿತ ಕಾಪಾಡುವ ಈ ಅಪಘಾತ ವಿಮಾ ಪ್ಯಾಕೇಜ್ ಯೋಜನೆಯ ಒಡಂಬಡಿಕೆಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಶಾಸಕ, ಕೆಎಸ್ ಆರ್ ಟಿಸಿ ಅಧ್ಯಕ್ಷರಾದ ಎಂ. ಚಂದ್ರಪ್ಪರವರ ಸಮ್ಮುಖದಲ್ಲಿ ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಡಿಜಿಎಂ ಪಂಕಜ್ ತಪ್ಲಿಯಾಲ್ ಅವರು ಸಹಿ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಂ. ಚಂದ್ರಪ್ಪ, ನಿಗಮವು ಜಾರಿಗೊಳಿಸುತ್ತಿರುವ ಈ ವಿಮಾ ಯೋಜನೆಯು ಕಾರ್ಮಿಕ ಮತ್ತು ಅವರ ಕುಟುಂಬದವರ ಹಿತದೃಷ್ಟಿಯಿಂದ ಜಾರಿಗೊಳಿಸುತ್ತಿರುವ ಉತ್ತಮವಾದ ಯೋಜನೆಯಾಗಿದೆ, ಭಾರತೀಯ ಸ್ಟೇಟ್ ಬ್ಯಾಂಕ್ ರವರ ಸಹಯೋಗಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ರಸ್ತೆ ಸಾರಿಗೆ ನಿಗಮಗಳಲ್ಲಿಯೇ ಅತ್ಯಧಿಕ ಮೊತ್ತದ ಅಪಘಾತ ( On duty ಮತ್ತು Off duty ಒಳಗೊಂಡಂತೆ ನೀಡಲಾಗುವ ವಿಮಾ ಯೋಜನೆಯಾಗಿರುವುದಾಗಿ ಸಂತಸ ವ್ಯಕ್ರಪಡಿಸಿದರು.

ಈ ಕಾರ್ಯಕ್ರಮದಲ್ಲಿ ಡಾ. ನವೀನ್ ಭಟ್ ವೈ, ನಿರ್ದೇಶಕರು (ಸಿಬಂದಿ & ಜಾಗೃತ), ಸರೋಜ್ ಕುಮಾರ್ ದಾಸ್, ಮುಖ್ಯ ವ್ಯವಸ್ಥಾಪಕರು, ಎಸ್ ಬಿಐ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಏನಿದು ಯೋಜನೆ ?

Advertisement

ಈ ಸಿಬಂದಿಗಳ ವೇತನ ಪ್ಯಾಕೇಜ್ ಅಪಘಾತ ವಿಮಾ ಯೋಜನೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ತಮ್ಮ ವೇತನ ಖಾತೆಯನ್ನು ಹೊಂದಿರುವ ನಿಗಮದ ನೌಕರರಿಗೆ ” ಪ್ರೀಮಿಯಂ ರಹಿತ” ವೈಯುಕ್ತಿಕ ಅಪಘಾತ ವಿಮೆಯನ್ನು ಒಳಗೊಂಡಿದೆ. ಈಗಾಗಲೇ ನಿಗಮದ ಶೇ55 ರಷ್ಷು ಸಿಬಂದಿಗಳು ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾತೆಗಳನ್ನು ಹೊಂದಿರುತ್ತಾರೆ.

ಈ ವೈಯುಕ್ತಿಕ ವಿಮಾ ಯೋಜನೆಯಿಂದ ಪಾಲಿಸಿದಾರರು ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ರೂ.50 ಲಕ್ಷಗಳ ಪರಿಹಾರದ ಹಣ ಕೂಡಲೇ ದೊರೆಯಲಿದೆ.

ಅಪಘಾತದಲ್ಲಿ ಸಿಬಂದಿಗಳು ಶಾಶ್ವತವಾಗಿ ಪೂರ್ಣ ಅಂಗವೈಕಲ್ಯಕ್ಕೆ ತುತ್ತಾದಲ್ಲಿ ರೂ.20 ಲಕ್ಷಗಳ ಹ಼ಣ ಹಾಗೂ ಶಾಶ್ವತ ಭಾಗಶ: ಅಂಗವೈಕಲ್ಯ ಉಂಟಾದಲ್ಲಿ ರೂ.10 ಲಕ್ಷಗಳ ವಿಮಾ ಪರಿಹಾರ ದೊರೆಯಲಿದೆ.

ಈ ವಿಮಾ ಯೋಜನೆಯಲ್ಲಿ ಮತ್ತೊಂದು ಉಪಯಕ್ತ ಕ್ರಮವೆಂದರೆ ಕರ್ತವ್ಯ ನಿರತ ಹಾಗೂ ಕರ್ತವ್ಯದಲ್ಲಿ ಇಲ್ಲದ (On duty and Off duty) ಸಮಯದಲ್ಲೂ ಆಗುವ ವೈಯಕ್ತಿಕ ಅಪಘಾತಗಳಿಗೂ ವಿಮೆ ಅನ್ವಯಿಸುತ್ತದೆ.

ಸಿಬಂದಿಗಳ ಅಪಘಾತದಲ್ಲಿನ ಪ್ಲಾಸ್ಟಿಕ್ ಸರ್ಜರಿ ಚಿಕಿತ್ಸೆಗಾಗಿ ಗರಿಷ್ಟ ರೂ.10 ಲಕ್ಷ, ಔಷಧಗಳ ಆಮದಿಗಾಗಿ ಗರಿಷ್ಟ ರೂ.5 ಲಕ್ಷ, ಕೋಮಾದಲ್ಲಿ ಮೃತಪಟ್ಟರೆ ಹೆಚ್ಚುವರಿ ರೂ.2 ಲಕ್ಷ (ರೂ.50 ಲಕ್ಷ + ರೂ.2 ಲಕ್ಷ), ಏರ್ ಅಂಬ್ಯೂಲೆನ್ಸ್ ಸೇವೆಗೆ ರೂ.10 ಲಕ್ಷ ವಿಮಾ ಪರಿಹಾರ ನೀಡಲಾಗುವುದು.

ಸಿಬಂದಿಗಳು ಅಪಘಾತದಲ್ಲಿ ಮೃತಪಟ್ಟರೆ ಮಕ್ಕಳ ಪದವಿ ಶಿಕ್ಷಣಕ್ಕೆ ಗರಿಷ್ಟ ರೂ.5 ಲಕ್ಷ ಹಾಗೂ ಹೆಣ್ಣು ಮಗಳ ವಿವಾಹಕ್ಕೆ ಗರಿಷ್ಟ ರೂ.5 ಲಕ್ಷಗಳ ವರೆಗೆ ಆರ್ಥಿಕ ಸಹಾಯವನ್ನು ಈ ವಿಮಾ ಯೋಜನೆಯು ಒಳಗೊಂಡಿರುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next