ಮಳವಳ್ಳಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಇದು ಕಡೆಯ ಚುನಾವಣೆಯಾಗಿರುವುದರಿಂದ ಹಿಂದುಳಿದ ಹಾಗೂ ಕುರುಬ ಸಮುದಾಯ ಅವರ ಕೈಬಲಪಡಿಸಲು ಒಗ್ಗಟ್ಟಿನಿಂದ ದುಡಿಯಬೇಕಿದೆ ಎಂದು ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಕರೆ ನೀಡಿದರು.
ತಾಲೂಕಿನ ಬೋಸೇಗೌಡನದೊಡ್ಡಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ನ ಕುರುಬ ಸಮುದಾಯ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಭ್ರಷ್ಟಾಚಾರ ರಹಿತ ಆಡಳಿತ ನೀಡಿರುವ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸಿದ್ದಾರೆ. ನುಡಿದಂತೆ ನಡೆದು ಬಡವರ ಹಸಿವು ನೀಗಿಸಿ ಇಡೀ ದೇಶವೇ ಮೆಚ್ಚುವಂಥ ಆಡಳಿತ ನೀಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ತರುವ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ರಾಜ್ಯದಲ್ಲಿ ಹಿಂದುಳಿದ ಸಮುದಾಯದ ರಾಜಕಾರಣಿಗಳನ್ನು ತುಳಿಯುವ ಯತ್ನ ನಡೆಯುತ್ತಿದೆ. ಹಿಂದುಳಿದ ಸಮುದಾಯ ಒಂದು ಶಕ್ತಿಯಾಗಿ ನಿಂತರೆ ವಿರೋ ಧಿಗಳನ್ನು ಮಟ್ಟಹಾಕಬಹುದು. ಮೀಸಲಾತಿಯಲ್ಲಿ ಅನ್ಯಾಯವಾದಾಗ ಧ್ವನಿ ಎತ್ತುವ ನಾಯಕನ ಅವಶ್ಯಕತೆ ಇದೆ. ಸಾಮಾಜಿಕ ನ್ಯಾಯದ ಸಿದ್ಧಾಂತ ಹೊಂದಿರುವ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಗೆಲ್ಲಿಸುವುದರ ಮೂಲಕ ಸಿದ್ದರಾಮಯ್ಯ ಅವರಿಗೆ ಶಕ್ತಿ ತುಂಬಬೇಕಿದೆ. ಸಿದ್ದರಾಮಯ್ಯ ಅವರು ಮತ್ತೂಮ್ಮೆ ಮುಖ್ಯಮಂತ್ರಿಯಾಗುವ ಸಾಧ್ಯತೆ ಇರುವುದರಿಂದ ಹಿಂದುಳಿದ ಸಮುದಾಯದ ಜನರು ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಬೇಕು ಎಂದರು.