ಬೆಂಗಳೂರು : ನೂತನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆಯ ಪ್ರಕ್ರಿಯೆ ಈಗಾಗಲೇ ಶುರುವಾಗಿದ್ದು, ಕೆಲವು ಶಾಸಕರಿಗೆ ಸಿಎಂ ಅವರಿಂದ ಕರೆ ಬಂದಿದೆ. ಇದೇ ಹಿನ್ನಲೆಯಲ್ಲಿ ಪ್ರಭು ಚವ್ಹಾಣ್ ಅವರಿಗೆ ಅಧಿಕೃತವಾಗಿ ಕರೆ ಬಂದಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಲು ತೆರಳುತ್ತಿದ್ದಾರೆ.
ಇನ್ನು ಬೀಳಗಿ ವಿಧಾನಸಭಾ ಕ್ಷೇತ್ರದ ಶಾಸಕ ಮುರುಗೇಶ್ ಆರ್ ನಿರಾಣಿ ಅವರಿಗೂ ಕೂಡ ಮುಖ್ಯಮಂತ್ರಿಗಳಿಂದ ಕರೆ ಹೋಗಿದ್ದು, ಅವರು ಕೂಡ ಸಿಎಂ ಭೇಟಿಯಾಗಲು ತೆರಳಿದ್ದಾರೆ.
ಇಷ್ಟೆ ಅಲ್ಲದೆ ಶಿವಮೊಗ್ಗ ಜಿಲ್ಲೆಯ ಇಬ್ಬರಿಗೆ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಫಿಕ್ಸ್ ಆಗಿದೆ. ಕೆ.ಎಸ್.ಈಶ್ವರಪ್ಪ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಕೆ.ಎಸ್.ಈಶ್ವರಪ್ಪ ಅವರಿಗೆ ಪ್ರಮಾಣ ವಚನ ಸ್ವೀಕಾರಕ್ಕೆ ಬರುವಂತೆ ಕರೆ ಬಂದಿದೆ. ಇಂದು ಬೆಳಗ್ಗೆ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಹೈಕಮಾಂಡ್ ನಿಂದ ಕರೆ ಬಂದಿದೆ.
ಇತ್ತ ಶಾಸಕ ಹಾಲಪ್ಪ ಆಚಾರ್ ಅವರಿಗೂ ಕರೆ ಬಂದಿದ್ದು, ಇನ್ನಷ್ಟೇ ಪೂರ್ಣ ಪ್ರಮಾಣದ ಸಚಿವರ ಪಟ್ಟಿ ಅಧಿಕೃತವಾಗಿ ಹೊರಬೀಳಬೇಕಿದೆ.