Advertisement

ಈ-ಕ್ಷಣ ಯೋಜನೆ ನಗರ ಪ್ರದೇಶಕ್ಕೂ ವಿಸ್ತರಣೆ

06:50 AM Sep 28, 2018 | |

ಬೆಂಗಳೂರು:ಜಾತಿ, ಆದಾಯ ಮತ್ತು ವಾಸದ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ತಕ್ಷಣವೇ ನೀಡುವ ಈ-ಕ್ಷಣ ವ್ಯವಸ್ಥೆಯನ್ನು ರಾಜ್ಯದ ನಗರ ಪ್ರದೇಶಗಳಿಗೂ ವಿಸ್ತರಿಸಲಾಗಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್‌.ವಿ. ದೇಶಪಾಂಡೆ ತಿಳಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, 2018-19ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಸಾರ್ವಜನಿಕರಿಗೆ ಅತ್ಯಗತ್ಯವಾದ ವಿವಿಧ ಪ್ರಮಾಣ ಪತ್ರಗಳನ್ನು ಆನ್‌ಲೈನ್‌ ಮೂಲಕ ತಕ್ಷಣವೇ ನೀಡುವ ಈ ಕ್ಷಣ ವ್ಯವಸ್ಥೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸುವುದಾಗಿ ಘೋಷಿಸಲಾಗಿತ್ತು. ಅದರಂತೆ ಈ ಯೋಜನೆಯು ನಗರ ಪ್ರದೇಶದಲ್ಲಿಯೂ ಲಭ್ಯವಾಗುವಂತೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಕ್ಷಣ ಯೋಜನೆಯು ಇದುವರೆಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮಾತ್ರ ಜಾರಿಯಲ್ಲಿತ್ತು.ಇನ್ನು ಮುಂದೆ ನಗರ ಪ್ರದೇಶಗಳ ಅಟಲ್‌ ಜಿ ಜನ ಸ್ನೇಹಿ ಕೇಂದ್ರಗಳಲ್ಲಿಯೂ ಸಾರ್ವಜನಿಕರಿಗೆ ಈ ಸೇವೆ  ಲಭ್ಯವಾಗಲಿದೆ ಎಂದು ಹೇಳಿದ್ದಾರೆ.ಸಾರ್ವಜನಿಕರಿಗೆ ಜಾತಿ, ಆದಾಯ ಮತ್ತು ವಾಸಸ್ಥಳದ ಪ್ರಮಾಣ ಪತ್ರಗಳು ಹೆಚ್ಚಿನ ಸಂದರ್ಭಗಳಲ್ಲಿ ಬೇಕಾಗುತ್ತವೆ ಎನ್ನುವುದನ್ನು ಗಮನಿಸಿ, ಸಾರ್ವಜನಿಕರಿಗೆ ತ್ವರಿತವಾಗಿ ಈ ಪ್ರಮಾಣ ಪತ್ರಗಳು ದೊರೆಯಬೇಕು ಎಂಬ ಆಶಯದಿಂದ ಈ ಕ್ಷಣ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next