Advertisement
ಈ ಪರೀಕ್ಷೆ (ಡಿಸಿಇಟಿ-2024)ಯನ್ನು ಆನ್‌ಲೈನ್ ಮೂಲಕ ನಡೆಸಲಾಗುವುದೆಂದು ಈ ಮೊದಲುತಿಳಿಸಲಾಗಿತ್ತು. ಆದರೆ ವಿವಿಧ ಕಾರಣಗಳಿಂದಾಗಿ ಪರೀಕ್ಷೆಯನ್ನು ಆಫ್ ಲೈನ್ ಸ್ವರೂಪದಲ್ಲಿ ಹಿಂದಿನ ವರ್ಷಗಳಲ್ಲಿ ನಡೆಸಿದಂತೆಯೇ ಒಎಂಆರ್ ಉತ್ತರ ಪತ್ರಿಕೆಯ ಮಾದರಿಯಲ್ಲಿ ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಪರೀಕ್ಷೆಯನ್ನು ಬಾಗಲಕೋಟೆ, ಬಳ್ಳಾರಿ, ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಉಡುಪಿ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯಪುರ ಜಿಲ್ಲೆ ಗಳಲ್ಲಿ ಮಾತ್ರ ನಡೆಸಲಾಗುವುದು. ಡಿಸಿಇಟಿ-2024ಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಈ ಮೇಲಿನ ಜಿಲ್ಲೆ ಗಳನ್ನು ಹೊರತುಪಡಿಸಿ ಬೇರೆ ಜಿಲ್ಲೆ ಗಳನ್ನು ಪರೀಕ್ಷಾ ಸ್ಥಳವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಈ ಮೇಲಿನ ಜಿಲ್ಲೆ ಗಳಲ್ಲಿ ಒಂದನ್ನು ಆಯ್ಕೆ ಮಾಡಿ ಡಿಸಿಇಟಿ-2024 ಪರೀಕ್ಷೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ. ಈ ಮೇಲಿನ ಜಿಲ್ಲೆ ಗಳನ್ನು ಹೊರತುಪಡಿಸಿ ಬೇರೆ ಜಿಲ್ಲೆ ಗಳನ್ನು ಪರೀಕ್ಷಾ ಸ್ಥಳವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ನಿಗದಿತ ಲಿಂಕ್ ಮೂಲಕ ಮೇ 24ರ ಬೆ. 11ರಿಂದ 27ರ ರಾತ್ರಿ 11.59ರ ಒಳಗೆ ಬದಲಿ ಪರೀಕ್ಷಾ ಜಿಲ್ಲೆ ಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದವರು ವಿವರಿಸಿದ್ದಾರೆ.