Advertisement
ಯೋಗದ ಮಹತ್ವ, ಜೀವನದಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಸಾರ್ವಜನಿಕರು, ಯುವ, ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಜೊತೆಗೆ ವಿಶ್ವ ಯೋಗ ದಿನವನ್ನು ವಿನೂತನವಾಗಿ ಆಚರಿಸುವ ಉದ್ದೇಶದಿಂದ ಜೂ.16 ರಿಂದ 21ರ ವರೆಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಎಂಬ ಘೋಷವಾಕ್ಯದಡಿ ಬೃಹತ್ ಯೋಗ ಜಾಥಾ ಏರ್ಪಡಿಸಲಾಗಿದೆ. ಜಾಥಾ ವಿದ್ಯಾರ್ಥಿ ಭವನ ವೃತ್ತ,
ಕೆಇಬಿ ವೃತ್ತ, ಜಯದೇವ ವೃತ್ತ, ಮಹಾನಗರಪಾಲಿಕೆ, ಮಹಾತ್ಮಗಾಂಧಿ ವೃತ್ತ, ಪಿಜೆ ಹೋಟೆಲ್, ಎವಿಕೆ ಕಾಲೇಜು ರಸ್ತೆ, ರಾಂ ಅಂಡ್ ಕೋ ವೃತ್ತ, ಚರ್ಚ್ ರಸ್ತೆ ಮೂಲಕ ಮೋತಿ ವೀರಪ್ಪ ಕಾಲೇಜು ಆವರಣದಲ್ಲಿ ಮುಕ್ತಾಯವಾಗಲಿದೆ. 2 ಸಾವಿರಕ್ಕೂ ಹೆಚ್ಚು ಯೋಗಾಸಕ್ತರು ಭಾಗವಹಿಸುವರು ಎಂದು ತಿಳಿಸಿದರು.
Related Articles
Advertisement
ಜೂ. 20ರಂದು ಯೋಗ ಜಾಥಾ ನಡೆಯಲಿದೆ. ಅಂದು ಬೆಳಗ್ಗೆ 7.30ಕ್ಕೆ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಯೋಗ ಜಾಗೃತಿಗಾಗಿ ವೀರಶೈವ ಪಂಚಮಸಾಲಿ ಸಮಾಜದ ಜಗದ್ಗುರು ವಚನಾನಂದ ಶ್ರೀಗಳ ಸಾರಥ್ಯದಲ್ಲಿ ವಿವಿಧ ಶಾಲಾ-ಕಾಲೇಜುಗಳ ಸುಮಾರು 30 ರಿಂದ 35 ಸಾವಿರ ವಿದ್ಯಾರ್ಥಿಗಳಿಂದ ಮಾನವ ಸರಪಳಿ ನಿರ್ಮಿಸಲಾಗುವುದು. ಮೈದಾನದ ಮಧ್ಯಭಾಗದಲ್ಲಿ ನಿರ್ಮಿಸಿರುವ ವೇದಿಕೆಯಲ್ಲಿ ಶ್ರೀ ವಚನಾನಂದ ಸ್ವಾಮೀಜಿ ಯೋಗ ಪ್ರದರ್ಶಿಸುವರು.ವಿದ್ಯಾರ್ಥಿಗಳು ಸಾಮೂಹಿಕವಾಗಿ ಯೋಗ ಪ್ರದರ್ಶನದಲ್ಲಿ ಭಾಗವಹಿಸಲಿದ್ದು, ದಾವಣಗೆರೆಯಲ್ಲಿ ಪ್ರಪ್ರಥಮ ಬಾರಿಗೆ 35 ಸಾವಿರ ವಿದ್ಯಾರ್ಥಿಗಳ ಸಾಮೂಹಿಕವಾಗಿ ಯೋಗ ಪ್ರದರ್ಶನ ನಡೆಸಲಾಗುತ್ತಿದೆ ಎಂದು ತಿಳಿಸಿದರು. 21ರಂದು ಮೋತಿವೀರಪ್ಪ ಕಾಲೇಜು ಆವರಣದಲ್ಲಿ ಬೆಳಗ್ಗೆ 5 ರಿಂದ 8.45 ರವರೆಗೆ ನಾಲ್ಕನೇ ಅಂತಾರಾಷ್ಟ್ರೀಯ
ಯೋಗ ದಿನಾಚರಣೆ ಏರ್ಪಡಿಸಲಾಗಿದೆ. ಬೆಳಗ್ಗೆ 5 ರಿಂದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ಧ್ಯಾನ
ಕಾರ್ಯಕ್ರಮ, 6 ರಿಂದ 7 ರವರೆಗೆ ಯೋಗಾಯೋಗ ಸಂಗಮ… ವೇದಿಕೆ ಕಾರ್ಯಕ್ರಮದಲ್ಲಿ ವೈದ್ಯಶ್ರೀ
ಚನ್ನಬಸವಣ್ಣನವರು ಹಾಗೂ ಹಾಸ್ಯ ಸಾಹಿತಿ ಪ್ರೊ| ಕೃಷ್ಣೇಗೌಡರಿಂದ ಉಪನ್ಯಾಸವಿದೆ. ಬೆಳಗ್ಗೆ 7 ರಿಂದ
7.45 ರವರೆಗೆ 5 ಸಾವಿರಕ್ಕೂ ಹೆಚ್ಚು ಯೋಗಾಸಕ್ತರು ಬೃಹತ್ ಯೋಗ ಪ್ರದರ್ಶನ ಪ್ರಸ್ತುತಪಡಿಸುವರು
ಎಂದು ತಿಳಿಸಿದರು. ಜಿಲ್ಲಾ ಯೋಗ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎನ್. ವಾಸುದೇವ ರಾಯ್ಕರ್ ಮಾತನಾಡಿ, ಯೋಗ
ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿರುವ ವಿವಿಧ ಕಾರ್ಯಕ್ರಮಗಳಿಗೆ ಎಲ್ಲ ಸಂಘ ಸಂಸ್ಥೆಗಳ ಮತ್ತು
ವಿವಿಧ ಇಲಾಖೆಗಳ ಸಹಕಾರ ಇದೆ. ಎಲ್ಲರೂ ಯೋಗ ದಿನಾಚರಣೆಯ ಯಶಸ್ಸಿಗೆ ಸಹಕರಿಸಬೇಕು ಎಂದು
ಮನವಿ ಮಾಡಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ|ಯು. ಸಿದ್ದೇಶ್ ಮಾತನಾಡಿ, ಜಿಲ್ಲಾಧಿಕಾರಿಯವರ ಪ್ರಯತ್ನದ ಫಲವಾಗಿ ಈ ಬಾರಿ ಜಿಲ್ಲೆಯ ಎಲ್ಲ ಯೋಗ ಸಂಸ್ಥೆಗಳು ಒಂದೇ ವೇದಿಕೆಯಡಿ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ ಎಂದು ತಿಳಿಸಿದರು. ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಚಾಲಕಿ ಬಿ.ಕೆ. ಲೀಲಾ ಇತರರು ಸುದ್ದಿಗೋಷ್ಠಿಯಲ್ಲಿದ್ದರು.