ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ
ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ -ಸಿಇಟಿ ಬರೆಯಲಿರುವ ವಿದ್ಯಾರ್ಥಿಗಳ ಸಂಖ್ಯೆ ಈ ಬಾರಿ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆ ಇದೆ. ದ್ವಿತೀಯ ಪಿಯು ಫಲಿತಾಂಶ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಮುನ್ನ ಪ್ರಕಟವಾಗಿರುವುದೇ ಇದಕ್ಕೆ ಕಾರಣ.
2019-20ನೇ ಸಾಲಿನ ವೃತ್ತಿಪರ ಕೋರ್ಸ್ ಗಳ ಸೀಟು ಹಂಚಿಕೆಗೆ ಎ. 29, 30ರಂದು ಮತ್ತು ಮೇ 1ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಸುಮಾರು 1.90 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿ ಕೊಂಡಿದ್ದಾರೆ.
ಪದವಿಪೂರ್ವ ಶಿಕ್ಷಣ ಇಲಾಖೆ ಸಂಪ್ರದಾಯ ಮುರಿದು ಸಿಇಟಿಗೂ ಮೊದಲೇ ಫಲಿತಾಂಶ ನೀಡಿದ್ದ ರಿಂದ ವಿಜ್ಞಾನ ವಿಭಾಗದಲ್ಲಿ ಅನುತ್ತೀರ್ಣ ರಾದ ವಿದ್ಯಾರ್ಥಿಗಳು ಸಿಇಟಿ ಬರೆಯಲು ಹಿಂದೇಟು ಹಾಕುತ್ತಿದ್ದಾರೆ ಎಂದು ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರಾಧಿಕಾರದಿಂದ ಸಿಇಟಿಗೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಂಡಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರಕ್ಕೆ ಬೇಕಾದ ಸೌಕರ್ಯವನ್ನು ಒದಗಿಸಲಾಗಿದೆ. ವಿದ್ಯಾರ್ಥಿಗಳು ಕೂಡ ತಯಾರಿ ಮಾಡಿಕೊಂಡಿದ್ದಾರೆ. ಈ ಮಧ್ಯೆ ಪಿಯುಸಿ ಫಲಿತಾಂಶ ಹೊರಬಿದ್ದಿರು ವುದರಿಂದ ಅನುತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಇರಿಸು ಮುರುಸು ಆರಂಭವಾಗಿದೆ. ಪಿಯುಸಿಯಲ್ಲೇ ಅನುತ್ತೀರ್ಣರಾದ್ದರಿಂದ ಸಿಇಟಿ ಏಕೆ ಬರೆಯಬೇಕು ಎಂಬ ಮನೋಭಾವ ವಿದ್ಯಾರ್ಥಿಗಳಲ್ಲಿ ಮೂಡಿದೆ ಎನ್ನಲಾಗುತ್ತಿದೆ.
ಐಸಿಎಸ್‌ಸಿ, ಸಿಬಿಎಸ್‌ಇ ಸೇರಿದಂತೆ ಆಂಧ್ರ, ತಮಿಳುನಾಡು, ಕೇರಳ ಮತ್ತು ತೆಲಂಗಾಣ ಮೊದಲಾದ ರಾಜ್ಯಗಳ 12ನೇ ತರಗತಿ ಪರೀಕ್ಷೆಯ ಫಲಿತಾಂಶವೂ ಇನ್ನೂ ಪ್ರಕಟ ವಾಗಿಲ್ಲ. ಹೀಗಾಗಿ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿ ಹೊರ ರಾಜ್ಯಗಳ ವಿದ್ಯಾರ್ಥಿ ಗಳಿಗೆ ಅನುಕೂಲವಾಗುವ ಸಾಧ್ಯತೆ ಇದೆ. ಅಲ್ಲದೆ, ಹಂಚಿಕೆಯಾಗದೆ ಬಾಕಿ ಉಳಿಯುವ ಎಂಜಿನಿಯರಿಂಗ್ ಸೀಟುಗಳ ಪ್ರಮಾಣವೂ ಹೆಚ್ಚಾಗುವ ಆತಂಕ ಇದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ವಿವರ ನೀಡಿದ್ದಾರೆ.