Advertisement
ಬಜಾಲ್ ನಿವಾಸಿ ರಯಾನ್ ಫೆರ್ನಾಂಡಿಸ್ (30) ಮತ್ತು ಪ್ರಿಯಾ ಫೆರ್ನಾಂಡಿಸ್ (32) ಮೃತರು. ಕಂಕನಾಡಿ ಫಾದರ್ ಮುಲ್ಲಸ್೯ ಆಸ್ಪತ್ರೆಯಲ್ಲಿ ಸಿಬ್ಬಂದಿಯಾಗಿರುವ ಇಬ್ಬರು ಕರ್ತವ್ಯ ಮುಗಿಸಿ ಉಳ್ಳಾಲ ಬಂಗೇರ ಲೇನ್ ನಲ್ಲಿರುವ ಬಾಡಿಗೆ ಮನೆಗೆ ತೆರಳುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ಪ್ಲೈಓವರ್ ಮೇಲಿಂದ ಕೆಳ ಮುಖವಾಗಿ ಸಂಚರಿಸುತ್ತಿದ್ದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಮೇಲಿದ್ದ ಇಬ್ಬರ ಮೇಲೂ ಚಲಿಸಿ ಕೆಲ ಮೀಟರ್ ದೂರಕ್ಕೆ ಎಳೆದುಕೊಂಡು ಹೋಗಿ ನಿಂತಿದೆ. ಘಟನೆಯಿಂದ ಪ್ರಿಯಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ರಯಾನ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.