Advertisement
1979ರಲ್ಲಿ ನಿರ್ಮಿಸಲಾದ ಸೇತುವೆ :
Related Articles
Advertisement
ಬೇಸಗೆಯಲ್ಲಿ ಮಳೆನೀರಿನ ರಭಸ ಕಡಿಮೆಯಿರುವುದರಿಂದ ಗ್ರಾಮಸ್ಥರು ಹೊಳೆಯ ನ್ನಿಳಿದು ಸಾಗುತ್ತಾರೆ. ಜನಪ್ರತಿನಿಧಿಗಳಿಗೆ, ಅಧಿಕಾರಿ ಗಳಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ನಕ್ಸಲ್ ಪೀಡಿತ ಪ್ರದೇಶವೆನ್ನುವ ಹಣೆಪಟ್ಟಿ ಹೊಂದಿದ್ದರೂ ಮೂಲಸೌಕರ್ಯಗಳಿಲ್ಲದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದೇವೆ ಎನ್ನುವುದು ಗ್ರಾಮಸ್ಥರ ಅಳಲು.
ಹಿಂದೆಯೂ ಜನ ಪ್ರತಿನಿಧಿಗಳಿಗೆ ಈ ಕುರಿತು ಗಮನಕ್ಕೆ ತಂದಿದ್ದೆವು. ಎಂಜಿನಿಯರ್ ಬಂದು ಹೊಸ ಸೇತುವೆಗೆ ಯೋಜನೆ ರೂಪಿಸುತ್ತೇವೆ ಎಂದು ತಿಳಿಸಿದ್ದರು. ಆದರೆ ಅದು ಅನುಷ್ಠಾನಕ್ಕೆ ಬರದೆ ಸಮಸ್ಯೆ ಎದುರಿಸುವಂತಾಗಿದೆ ಎಂದು ಅಮಾಸೆಬೈಲು ಗ್ರಾ.ಪಂ. ಸದಸ್ಯ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕಿರು ಸೇತುವೆಯ ಪಿಲ್ಲರ್‌ಗಳು ಮಳೆಯ ರಭಸಕ್ಕೆ ಬಲ ಕಳೆದುಕೊಂಡಿವೆ. ಸೇತುವೆ ಕೆಳ ಭಾಗದಲ್ಲಿನ ಸಿಮೆಂಟ್, ಜಲ್ಲಿ ಕಲ್ಲು ಕಿತ್ತುಹೋಗಿ ಕಬ್ಬಿಣ ಸರಳುಗಳು ಕಾಣುತ್ತಿವೆ. ಅಲ್ಲದೆ ಅಲ್ಲಲ್ಲಿ ಕುಸಿತವಾಗಿದೆ. ಈ ಭಾಗದಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಿರುವುದರಿಂದ, ಕೆಲಸಕ್ಕಾಗಿ ಅವರು ಪೇಟೆ ಪಟ್ಟಣಗಳಿಗೆ ತಲು ಪಲು ಈ ಸೇತುವೆಯನ್ನೇ ಅವಲಂಬಿಸಿದ್ದಾರೆ. ತೊಂಬಟ್ಟು ಪೇಟೆಗೆ ಬಸ್ ಸಂಪರ್ಕವಿರುವುದರಿಂದ ಜನರ ಓಡಾಟವೂ ಹೆಚ್ಚಿರುತ್ತದೆ.
ಅಮಾಸೆಬೈಲು- ತೊಂಬಟ್ಟು ರಸ್ತೆಯನ್ನು ಮೇಲ್ದರ್ಜೆಗೇರಿಸಲು ಮತ್ತು ತೊಂಬಟ್ಟುವಿನಿಂದ ಇರ್ಕಿಗದ್ದೆ, ಕಬ್ಬಿನಾಲೆ ಸಂಪರ್ಕ ಸೇತುವೆ ನಿರ್ಮಾಣಕ್ಕಾಗಿ ಸ್ಥಳೀಯರಿಂದ ಮನವಿ ಬಂದಿದೆ. ಸೇತುವೆ ಹಾಗೂ ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಬೇಕಾಗಿರುವುದರಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇನೆ.– ಬಿ.ಎಂ. ಸುಕುಮಾರ್ ಶೆಟ್ಟಿ, ಶಾಸಕರು
ತೊಂಬಟ್ಟು- ಕಬ್ಬಿನಾಲೆ ಪ್ರದೇಶಗಳು ಅಮಾಸೆಬೈಲು ಗ್ರಾ.ಪಂ. ವ್ಯಾಪ್ತಿಗೆ ಬಂದರೂ, ವಿಧಾನಸಭೆ ಕ್ಷೇತ್ರ ಬೈಂದೂರು. ಸೇತುವೆ ಹಾಗೂ ರಸ್ತೆ ಅಭಿವೃದ್ಧಿಯ ಬಗ್ಗೆ ಮನವಿಗಳು ಬಂದಿವೆ. ಗ್ರಾ.ಪಂ. ನಿರ್ಣಯ ಮಾಡಿ, ಸ್ಥಳೀಯ ಸದಸ್ಯರ ಮೂಲಕ ಬೈಂದೂರು ಶಾಸಕರಿಗೆ ಕಳುಹಿಸಿದ್ದೇವೆ.–ಚಂದ್ರಶೇಖರ ಶೆಟ್ಟಿ ಕೆಲಾ ,ಅಮಾಸೆಬೈಲು ಗ್ರಾ.ಪಂ. ಅಧ್ಯಕ್ಷ
ತೊಂಬಟ್ಟು ರಸ್ತೆ ಹಾಗೂ ಸೇತುವೆ ದುರಸ್ತಿ ಸಲುವಾಗಿ ವರದಿ ಮಾಡಿ ಇಲಾಖೆಗೆ ಕಳುಹಿಸಿದ್ದೇವೆ. ರಸ್ತೆಯ ತುರ್ತು ಕಾಮಗಾರಿಗೆ ಜಿಲ್ಲಾಧಿಕಾರಿ ಅವರ ಹತ್ತಿರ ಹಣ ಬಿಡುಗಡೆಗೆ ಮನವಿ ಮಾಡಿದ್ದೇವೆ. –ಶ್ರೀಧರ್ ಪಾಲೇಕರ್, ಅಭಿಯಂತ, ಜಿ.ಪಂ. ಉಡುಪಿ
-ಸತೀಶ ಆಚಾರ್ ಉಳ್ಳೂರು