Advertisement

ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಕೆಆರ್‌ಎಸ್‌ ಅಭಿವೃದ್ಧಿ

11:06 AM Nov 15, 2018 | Team Udayavani |

ಬೆಂಗಳೂರು: ವಿಶ್ವವಿಖ್ಯಾತ ಕೆಆರ್‌ಎಸ್‌ ಉದ್ಯಾನವನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ.

Advertisement

1200 ಕೋಟಿ ರೂ. ವೆಚ್ಚದಲ್ಲಿ 125 ಅಡಿ ಕಾವೇರಿ ಮಾತೆ ಪ್ರತಿಮೆ ಒಳಗೊಂಡ 360 ಅಡಿ ಎತ್ತರದ ಮ್ಯೂಸಿಯಂ ಸಮುತ್ಛಯ ಗೋಪುರ ಸಮೇತ ಗಾಜಿನ ಮನೆ, ವೀಕ್ಷಣೆ ಗೋಪುರ, ಬ್ಯಾಂಡ್‌ ಸ್ಟಾಂಡ್‌, ಒಳಗಾಂಗಣ ಕ್ರೀಡಾಂಗಣ ಮತ್ತಿತರ ಐತಿಹ್ಯ ಸಾರುವ
ಕಟ್ಟಡಗಳನ್ನು ಡಿಸ್ನಿಲ್ಯಾಂಡ್‌ ಮಾದರಿಯು ಹೊಂದಿರಲಿದೆ. ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ನಂತರ ಮಾಹಿತಿ ನೀಡಿದ ಸಚಿವ ಡಿ.ಕೆ. ಶಿವಕುಮಾರ್‌, ಜೈಪುರದ ಹಿರಿಯ ಆರ್ಕಿಟೆಕ್ಟ್ ಕನ್ಸಲ್‌ ಟೆಂಟ್‌ ಸಂಸ್ಥೆ ನೀಡಿದ ಪ್ರಾತ್ಯಕ್ಷಿಕೆ ಆಧರಿಸಿ ಮತ್ತಷ್ಟು ಸಲಹೆ-ಸೂಚನೆಗಳನ್ನು ನೀಡಲಾಗಿದೆ. ಈ ಪಾರಂಪರಿಕ ತಾಣದ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಬೃಂದಾವನವನ್ನು ವಿಶ್ವಪ್ರವಾಸಿ ತಾಣಗಳಲ್ಲಿ ಅಗ್ರಗಣ್ಯ ಸ್ಥಾನದಲ್ಲಿ ನಿಲ್ಲಿಸುವುದು ಯೋಜನೆಯ ಉದ್ದೇಶ.

ಯೋಜನೆಯ ಒಟ್ಟು ವೆಚ್ಚ 1200 ಕೋಟಿ ರೂ. ಆಗಲಿದ್ದು, ಜಾಗತಿಕ ಟೆಂಡರ್‌ ಮೂಲಕ ವಿಶ್ವಮಟ್ಟದ ಸಂಸ್ಥೆಗೆ ಯೋಜನೆ ಗುತ್ತಿಗೆ ವಹಿಸಿಕೊಡಲಾಗುವುದು. ಆದರೆ, ಸ್ಥಳಾವಕಾಶ ಬಿಟ್ಟು ರಾಜ್ಯ ಸರ್ಕಾರ ಒಂದು ಪೈಸೆ ಬಂಡವಾಳವನ್ನೂ ಹೂಡುವುದಿಲ್ಲ. ಟೆಂಡರ್‌ನಲ್ಲಿ ಭಾಗವಹಿಸುವ ಸಂಸ್ಥೆ ಉತ್ತಮ ಆರ್ಥಿಕ ಹಿನ್ನೆಲೆ ಹೊಂದಿದ್ದು, ಕಲಾತ್ಮಕ ವಿನ್ಯಾಸದಲ್ಲಿ ಜಾಗತಿಕ ಮಟ್ಟದ
ನೈಪುಣ್ಯತೆ ಸಹ ಹೊಂದಿದೆ ಎಂದು ಹೇಳಿದರು.

ಈಗಿರುವ ದೋಣಿ ವಿಹಾರ ಸರೋವರದ ಪಕ್ಕದಲ್ಲಿ ಮತ್ತೂಂದು ಸರೋವರ ನಿರ್ಮಿಸಲಾಗುವುದು. ಅದರ ಮಧ್ಯದಲ್ಲಿ 360 ಅಡಿ ಎತ್ತರದ ಮ್ಯೂಸಿಯಂ ಸಮುತ್ಛಯ ಅಸ್ತಿತ್ವಕ್ಕೆ ಬರಲಿದೆ. ಈ ಸಮುತ್ಛಯದ ಮೇಲ್ಭಾಗದಲ್ಲಿ ಕಾವೇರಿ ಮಾತೆಯ 125 ಅಡಿ ಎತ್ತರದ
ಪ್ರತಿಮೆ ಇರಲಿದೆ. ಕಾವೇರಿ ಮಾತೆಯ ಪಾದತಲದಲ್ಲಿ ಮ್ಯೂಸಿಯಂ ಕಟ್ಟಡ ಬರಲಿದೆ. ಬೃಂದಾವನದ ಎರಡೂ ಕಡೆಯಿಂದ ಅಣೆಕಟ್ಟೆಯ ವಿಹಂಗಮ ನೋಟ ಗೋಚರವಾಲಿದೆ. ಮ್ಯೂಸಿಯಂನಲ್ಲಿ ಕೆಆರ್‌ಎಸ್‌, ಮೈಸೂರು, ಕರ್ನಾಟಕದ ಐತಿಹ್ಯ ಸಾರುವ ಕಲಾತ್ಮಕ, ಪ್ರಾಚ್ಯವಸ್ತುಗಳು ಇರಲಿವೆ.

Advertisement

ಮೈಸೂರು ಹಾಗೂ ಮಂಡ್ಯದ ಕೆಆರ್‌ಎಸ್‌ ಈಗಾಗಲೇ ಜಗತøಸಿದ್ಧವಾಗಿವೆ. ಇವುಗಳನ್ನು ವಿಶ್ವದಲ್ಲೇ ಅಗ್ರಗಣ್ಯ ಪ್ರವಾಸಿ ಆಕರ್ಷಣೆಯ ತಾಣವಾಗಿ ಪರಿ ವರ್ತಿಸುವುದು ಯೋಜನೆಯ ಉದ್ದೇಶ. ಈಗ ಬೃಂದಾ ವನದಿಂದ ರಾಜ್ಯ ಸರ್ಕಾರಕ್ಕೆ ಬರುತ್ತಿರುವ ವಾರ್ಷಿಕ ಆದಾಯ 30 ಕೋಟಿ ರೂ. ಎಂದು ತಿಳಿಸಿದರು.

ಎರಡು ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸುವ ಗುರಿ ಹಾಕಿಕಳೊಳ್ಳಲಾಗಿದ್ದು ಯೋಜನಾ ವರದಿ ಹಾಗೂ ಒಪ್ಪಂದ ಕುರಿತು ನ.20ರಂದು ಕಾವೇರಿ ನೀರಾವರಿ ನಿಗಮದ ಆಡಳಿತ ಮಂಡಳಿ ಸಭೆ, ಸರ್ಕಾರದ ಉನ್ನತ ಮಟ್ಟದ ಸಮಿತಿಯಲ್ಲಿ ಕೂಲಂಕುಷ ಪರಿಶೀಲನೆ ನಡೆದು ನಂತರ ಸಚಿವ ಸಂಪುಟ ಸಭೆಯಲ್ಲಿ ಜಾಗತಿಕ ಟೆಂಡರ್‌ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದು
ಹೇಳಿದರು.

ಸಭೆಯಲ್ಲಿ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌, ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಕಾರ್ಯದರ್ಶಿ ಜೈ ಪ್ರಕಾಶ್‌, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಡಾ.ಎಸ್‌.ಸುಬ್ರಹ್ಮಣ್ಯ, ಪ್ರವಾಸೋದ್ಯಮ ಇಲಾಖೆ
ಕಾರ್ಯದರ್ಶಿ ಅನಿಲ್‌ಕುಮಾರ್‌, ಕಾವೇರಿ ನೀರಾವರಿ ನಿಗಮ ವ್ಯವಸ್ಥಾಪಕ ಎಚ್‌.ಎಲ್‌.ಪ್ರಸನ್ನ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next