Advertisement

ಗಲಭೆಕೋರರು ದೆಹಲಿಯವರು ಎಂದು ಕರೆಯಲು ಅರ್ಹರಲ್ಲ: ಸಂಸದ ಗಂಭೀರ್

05:35 PM Apr 17, 2022 | Team Udayavani |

ನವದೆಹಲಿ: ಜಹಾಂಗೀರ್ಪುರಿ ಹಿಂಸಾಚಾರವನ್ನು ಖಂಡಿಸಿದ ದೆಹಲಿ ಬಿಜೆಪಿ ಸಂಸದ ಗೌತಮ್ ಗಂಭೀರ್, ಈ ರೀತಿ ಮಾಡುವವರು ದೆಹಲಿಯವರು ಎಂದು ಕರೆಯಲು ಅರ್ಹರಲ್ಲ ಎಂದು ಹೇಳಿದ್ದಾರೆ.

Advertisement

ಜಹಾಂಗೀರ್‌ಪುರಿಯಲ್ಲಿ ನಡೆದ ಮೆರವಣಿಗೆಯಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದು, ಹಲವಾರು ಪೊಲೀಸರು ಗಾಯಗೊಂಡ ಕುರಿತು ಟ್ವೀಟ್ ಮಾಡಿದ ಕ್ರಿಕೆಟಿಗ-ರಾಜಕಾರಣಿ, ಜನರು ಶಾಂತಿಯನ್ನು ಕಾಪಾಡುವಂತೆ ಒತ್ತಾಯಿಸಿ, ಹನುಮ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿರುವುದು ದುಃಖಕರ ಮತ್ತು ಖಂಡನೀಯ. ಇದನ್ನು ಮಾಡುವವರು ದೆಹಲಿಯವರು ಎಂದು ಕರೆಯಲು ಅಥವಾ ಇಲ್ಲಿ ವಾಸಿಸಲು ಅರ್ಹರಲ್ಲ. ಶಾಂತಿ ಕಾಪಾಡುವಂತೆ ಎಲ್ಲರಿಗೂ ಮನವಿ ಮಾಡಲು ಬಯಸುತ್ತೇನೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ ಎಂದು ಬರೆದಿದ್ದಾರೆ.

ವಾಯುವ್ಯ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಹನುಮ ಜಯಂತಿ ಮೆರವಣಿಗೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ಹದಿನಾಲ್ಕು ಜನರನ್ನು ಬಂಧಿಸಲಾಗಿದೆ.

ಶನಿವಾರ ಸಂಜೆ ಎರಡು ಸಮುದಾಯಗಳ ನಡುವಿನ ಘರ್ಷಣೆಯಲ್ಲಿ ಕಲ್ಲು ತೂರಾಟ ನಡೆದಿ ದ್ದು, ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಹಿಂಸಾಚಾರದ ವೇಳೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗೆ ಗುಂಡು ತಗುಲಿತ್ತು.

Advertisement

Udayavani is now on Telegram. Click here to join our channel and stay updated with the latest news.

Next