Advertisement
ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಾಕ್ ಪರ ಘೋಷಣೆ ಕೂಗಿದ ದೆಶದ್ರೋಹಿಗಳನ್ನು ದೇಶದಿಂದ ಹೊರಗೆ ದಬ್ಬಬೇಕಾಗುತ್ತದೆ. ಈ ಪ್ರಕರಣದ ತನಿಖೆ ನಡೆಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದರು.
Related Articles
Advertisement
ರಾಜ್ಯದಲ್ಲಿನ ಈ ಪರಿಸ್ಥಿತಿ ನಿಭಾಯಿಸಲು ಅಸಾಧ್ಯವಾದರೆ ಗ್ಯಾರಂಟಿ ಯೋಜನೆ ಮಾತ್ರ ಹೇಳಿಕೊಂಡು ಹೋಗಬೇಡಿ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರಿನ ರಾಮೇಶ್ವರಂ ಹೊಟೇಲ್ ಬಾಂಬ್ ಸ್ಫೋಟ ಪ್ರಕರಣ ಉಲ್ಲೇಖಿಸಿದ ಯತ್ನಾಳ, ಈ ಕೃತ್ಯವನ್ನು ಭಜರಂಗ ದಳದ ಮೇಲೆ ಹೊರಿಸುವ ಹುನ್ನಾರವಿತ್ತು. ಬಾಂಬ್ ಸ್ಫೋಟ ಮಾಡುವವರಿಗೆ ಕರ್ನಾಟಕ ರಾಜ್ಯ ಪ್ರಯೋಗ ಶಾಲೆಯಾಗಿದೆ. ಮಾರುಕಟ್ಟೆ, ಸಿನಿಮಾ ಮಂದಿರದಂಥ ಜನನಿಬಿಡ ಪ್ರದೇಶದಲ್ಲಿ ಆಗಿದ್ದರೆ ಭಾರಿ ಅನಾಹುತ ಆಗುತ್ತಿತ್ತು ಎಂದು ಆಕ್ರೋಶ ಹೊರಹಾಕಿದರು.
ಅಯೋಧ್ಯಾ ರಾಮ ಮಂದಿರ ನಿರ್ಮಾಣ ಆಗಿರುವುದರಿಂದಲೇ ಶುಕ್ರವಾರ ದಿನವೇ ಉದ್ದೇಶಪೂರ್ವಕವಾಗಿ ಹೊಟೇಲಿನಲ್ಲಿ ಸ್ಫೋಟ ನಡೆಸಲಾಗಿದೆ. ಇವರೆಲ್ಲ ನಾಶವಾಗುವ ಕಾಲ ಹತ್ತಿರ ಬಂದಿದೆ ಎಂದು ವಾಗ್ದಾಳಿ ನಡೆಸಿದರು.
ಲೋಕಸಭೆಗೆ ಶೀಘ್ರವೇ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದ್ದು, ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಸಮಾನ ನಾಗರಿಕ ಕಾಯ್ದೆ ಜಾರಿಗೆ ಬರಲಿದೆ. ಒಂದು ಕುಟುಂಬಕ್ಕೆ ಎರಡೇ ಮಕ್ಕಳು ಕಾನೂನು ಬರಲಿದೆ ಎಂದರು.