Advertisement

ಬಿಜೆಪಿಗೆ ಮತ ಹಾಕುವವರು ಮುಸ್ಲಿಮರೇ ಅಲ್ಲ: ಜಮೀರ್‌

01:33 AM Feb 04, 2019 | Team Udayavani |

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೇ ಮತ ಹಾಕುವಂತೆ ಕರೆ ನೀಡಿದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹಮ್ಮದ್‌, ‘ಬಿಜೆಪಿಗೆ ಮತ ಹಾಕುವ ಮುಸ್ಲಿಮರು ಮುಸ್ಲಿಮರೇ ಅಲ್ಲ’ ಎಂದು ಹೇಳಿದರು.

Advertisement

ನಗರದ ಅರಮನೆ ಮೈದಾನದಲ್ಲಿ ಆಲ್‌ ಇಂಡಿಯಾ ಜಮಿಯತ್‌ವುಲ್‌ ಮನ್ಸೂರ್‌ ಭಾನುವಾರ ಹಮ್ಮಿಕೊಂಡಿದ್ದ ನದಾಫ್, ಪಿಂಜಾರ ಹಾಗೂ ಮನ್ಸೂರಿ ಸಮಾಜಗಳ ರಾಷ್ಟ್ರೀಯ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಒಂದು ವೇಳೆ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾದರೆ, ಅಲ್ಪಸಂಖ್ಯಾತರು ಭಯದಲ್ಲಿ ಬದುಕಬೇಕಾಗುತ್ತದೆ. ಆದ್ದರಿಂದ ಜಾತ್ಯತೀತ ತತ್ವದಲ್ಲಿ ನಂಬಿಕೆಯಿರುವ ಪಕ್ಷಕ್ಕೇ ಮತ ಹಾಕಬೇಕು. ಸಮುದಾಯ ಒಗ್ಗಟ್ಟಾಗಿ ಮತ್ತು ಕಡ್ಡಾಯವಾಗಿ ಮತ ಚಲಾಯಿಸಿದರೆ, ರಾಜ್ಯದಲ್ಲಿ ಕಾಂಗ್ರೆಸ್‌ 20ಕ್ಕೂ ಅಧಿಕ ಸೀಟುಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಶೇಷ ಅನುದಾನ: ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ನದಾಫ್, ಪಿಂಜಾರ ಸಮುದಾಯಕ್ಕೆ ವಿಶೇಷ ಅನುದಾನ ಮೀಸಲಿಡುವಂತೆ ಮುಖ್ಯಮಂತಿಗೆ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ 85 ಲಕ್ಷ ಮುಸ್ಲಿಮರ ಪೈಕಿ 30 ಲಕ್ಷ ನದಾಫ್, ಪಿಂಜಾರರು ಇದ್ದಾರೆ. ಹೀಗಾಗಿ, ಆ ಸಮುದಾಯದ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಡ ಲಾಗುವುದು. ಅಲ್ಲದೆ, ಜಾತಿ ಪ್ರಮಾಣಪತ್ರ ನೀಡುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.

Advertisement

ಉತ್ತರ ಪ್ರದೇಶದ ಮಾಜಿ ಸಚಿವ ಆರ್‌.ಎ. ಉಸ್ಮಾನಿ ಮನ್ಸೂರಿ, ಪಶ್ಚಿಮ ಬಂಗಾಳ ಶಾಸಕ ಮೊಹಿದ್ದೀನ್‌ ಶಮ್ಸ್, ರಾಷ್ಟ್ರೀಯ ಅಧ್ಯಕ್ಷ ಜಾವೀದ್‌ ಇಕ್ಬಾಲ್‌ ಮನ್ಸೂರಿ ಮತ್ತಿತರರು ಉಪಸ್ಥಿತರಿದ್ದರು.

ಗೌಡರು ನನ್ನನ್ನು ಸೋಲಿಸಲು ಯತ್ನಿಸಿದರು

‘ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಶತಪ್ರಯತ್ನ ಮಾಡಿದರು. ಇದಕ್ಕಾಗಿ ಚಾಮರಾಜಪೇಟೆಯಲ್ಲಿ 15 ದಿನ ವಾಸ್ತವ್ಯ ಹೂಡಿದ್ದರು. ಆದರೆ, ಏನೂ ಪ್ರಯೋಜನ ಆಗಲಿಲ್ಲ. ದೇವರು ನನ್ನನ್ನು ಕೈಬಿಡಲಿಲ್ಲ ಎಂದು ಜಮೀರ್‌ ಅಹಮ್ಮದ್‌ ತಿಳಿಸಿದರು. ಪಕ್ಷದಲ್ಲಿ ರೋಷನ್‌ ಬೇಗ್‌, ಎನ್‌.ಎ. ಹ್ಯಾರಿಸ್‌ ಸೇರಿದಂತೆ ಅನೇಕ ಅಲ್ಪಸಂಖ್ಯಾತ ಹಿರಿಯ ನಾಯಕ ರಿದ್ದರೂ, ಸಚಿವ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಲು ಮುಖ್ಯ ಕಾರಣ ಹೈಕಮಾಂಡ್‌ ಹಾಗೂ ಜನರೊಂದಿಗಿನ ನನ್ನ ಒಡನಾಟ ಎಂದು ಸೂಚ್ಯವಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next