Advertisement

CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’

01:12 AM Nov 15, 2024 | Team Udayavani |

ಬೆಂಗಳೂರು: ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರದಿಂದ ಆರಂಭಗೊಂಡಿರುವ 14ರ ವಯೋಮಿತಿಯ ತೃತೀಯ ಮಿನಿ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

Advertisement

ಈ ವೇಳೆ ಮಾತನಾಡಿದ ಅವರು, ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಕೃಪಾಂಕ ನೀಡಲು ಸರಕಾರ ಚಿಂತನೆ ನಡೆಸುತ್ತಿದೆ. ಕ್ರೀಡಾ ವಿದ್ಯಾರ್ಥಿಗಳು ದಿನದಲ್ಲಿ ಬಹಳಷ್ಟು ಸಮಯವನ್ನು ಕ್ರೀಡಾಭ್ಯಾಸಕ್ಕೂ ಮೀಸಲಿಡಬೇಕಾಗಿ ಬರುವುದರಿಂದ ಅವರ ಶಿಕ್ಷಣಕ್ಕೂ ಬೆಂಬಲಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಯೋಚಿಸುತ್ತಿದೆ ಎಂದರು.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಶೇ. 3 ಮತ್ತು ಇತರ ಎಲ್ಲಾ ಇಲಾಖೆಗಳಲ್ಲಿ ಶೇ. 2ರಷ್ಟು ಕ್ರೀಡಾ ಕೋಟಾವನ್ನು ಮೀಸಲಿಡಲಾಗಿದೆ.

ಕ್ರೀಡಾಪಟುಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದವರು ಹೇಳಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next