Advertisement

400 ಪಿಎಚ್‌ಸಿ ಮೇಲ್ದರ್ಜೆಗೇರಿಸಲು ಚಿಂತನೆ: ಸಚಿವ

02:50 PM Feb 27, 2021 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆ ಗೇರಿಸುವ ಸಂಕಲ್ಪ ತೊಟ್ಟಿದ್ದು, ಮುಂದಿನ ಬಜೆಟ್‌ನಲ್ಲಿ ರಾಜ್ಯಾದ್ಯಂತ ಸುಮಾರು 400 ಪ್ರಾಥಮಿಕ ಕೇಂದ್ರಗಳನ್ನು ಆಯ್ಕೆ ಮಾಡಲು ಚಿಂತನೆ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

Advertisement

ತಾಲೂಕಿನ ಮಂಡಿಕಲ್ಲು ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ, ತಾಲೂಕು ಆಡಳಿತ ವತಿಯಿಂದ ಹಮ್ಮಿ ಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ, ಗ್ರಾಮಗಳ ಕಡೆ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ರಾಜೀವ್‌ಗಾಂಧಿ ಆರೋಗ್ಯ ವಿವಿ ಸಹಯೋಗದಲ್ಲಿ ಚಿಕ್ಕಬಳ್ಳಾಪುರತಾಲೂಕಿನ ಮಂಡಿಕಲ್ಲು, ಪೆರೇಸಂದ್ರ ಹಾಗೂದಿಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 25ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.ರಾಜ್ಯದಲ್ಲೂ ಕೂಡ ಪ್ರಾಥಮಿಕ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಚಿಂತನೆ ಮಾಡಿದ್ದು, ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಸುಮಾರು 400ಕ್ಕೂ ಹೆಚ್ಚುಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಘೋಷಣೆ ಮಾಡುವ ಚಿಂತನೆ ಇದೆ ಎಂದರು.

ವಿಸ್ತರಿಸಿ: ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆ ಕಾರ್ಯಕ್ರಮವೂ ರಾಜ್ಯದಲ್ಲೇ ವಿನೂತನ. ಸರ್ಕಾರದ ಎಲ್ಲಾ ಇಲಾಖೆಗಳ ಆಡಳಿತವನ್ನುಗ್ರಾಮೀಣ ಜನರ ಮನೆ ಬಾಗಿಲಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನವನ್ನು ಜಿಲ್ಲಾಧಿಕಾರಿಗಳು ಮಾಡಿದ್ದು, ಜಿಲ್ಲಾಡಳಿತವು ಮುಂದಿನ ದಿನಗಳಲ್ಲಿ ಇದನ್ನು ಜಿಲ್ಲೆಯಾದ್ಯಂತ ವಿಸ್ತರಿಸಬೇಕು ಎಂದು ಸೂಚನೆ ನೀಡಿದರು.

ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಮಾತನಾಡಿ, ಜಿಲ್ಲೆಯ ಗ್ರಾಮೀಣ ಭಾಗಕ್ಕೆ ಆಡಳಿತ ಸೇವೆ ಒದಗಿಸುವ ದಿಸೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಅವರ ಆಶಯದಂತೆ ಸರ್ಕಾರದ ಸವಲತ್ತುಗಳನ್ನು ಮನೆ ಬಾಗಿಲಿಗೆ ಕಲ್ಪಿಸಲಾಗುತ್ತಿದೆ ಎಂದರು.

Advertisement

ಪೋಡಿಮುಕ್ತ: ಜಿಲ್ಲಾಧಿಕಾರಿ ಆರ್‌.ಲತಾ ಮಾತನಾಡಿ, ಜಿಲ್ಲೆಯಲ್ಲಿ ಪ್ರಥಮ ಬಾರಿಗೆಜಿಲ್ಲಾಡಳಿತ ನಡೆ, ಗ್ರಾಮಗಳ ಕಡೆ ಕಾರ್ಯಕ್ರಮಆಯೋಜಿಸಿ, ಮಂಡಿಕಲ್ಲು ಹೋಬಳಿಯಲ್ಲಿ ಸುಮಾರು 31 ಸಾವಿರ ಫಲಾನುಭವಿಗಳಿಗೆ ವಿವಿಧ ಸವಲತ್ತು ನೀಡಲಾಗಿದೆ. ಈ ಕಾರ್ಯಕ್ರಮದಭಾಗವಾಗಿ ಮಂಡಿಕಲ್ಲು ಹೋಬಳಿಯನ್ನುಪೋಡಿಮುಕ್ತ ಗ್ರಾಮ ಎಂದು ಘೋಷಿಸಲಾಗಿದ್ದು,ಸುಮಾರು 9.16 ಕೋಟಿ ರೂ. ವೆಚ್ಚದ ವಿವಿಧ ಇಲಾಖಾ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಶಿವಶಿಂಕರ್‌ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಮಾವು ಮತ್ತು ಮಾರುಕಟ್ಟೆಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜು, ಮಂಡಿಕಲ್ಲು ಹೋಬಳಿ ಜಿಪಂ ಸದಸ್ಯರಾದ ಪಿ.ಎನ್‌. ಕೇಶವರೆಡ್ಡಿ, ತಾಪಂ ಅಧ್ಯಕ್ಷ ರಾಮಸ್ವಾಮಿ, ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌, ಉಪ ಅರಣ್ಯಸಂರಕ್ಷಣಾಧಿಕಾರಿ ಅರಸಲನ್‌, ಉಪವಿಭಾಗಾಧಿಕಾರಿಎ.ಎನ್‌.ರಘುನಂದನ್‌, ಜಿಪಂ ಮುಖ್ಯ ಯೋಜನಾಧಿಕಾರಿ ಧನುರೇಣುಕಾ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next